ಕಾನ್ಪುರ: ಯುವತಿಯರಿಗೆ ನೀಲಿ ಚಿತ್ರದ ದೃಶ್ಯಗಳನ್ನು ತೋರಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಮುಸ್ಲಿಂ ಧರ್ಮಗುರುನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಕಾನ್ಪುರ ಬಳಿ ನಡೆದಿದೆ.
ಮೌಲ್ವಿ ಮೊಹಮ್ಮದ್ ಅಮೀರ್ ಎಂಬಾತನೇ ಎಸಗಿದ್ದಾನೆಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯು ಚಾಮನಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಮ್ಮ ಮಗಳಿಗೆ ಅಶ್ಲೀಲ ತುಣುಕುಗಳನ್ನು ತೋರಿಸಿ ಬಲವಂತವಾಗಿ ಕಿರುಕುಳ ನೀಡಲು ಪ್ರಯತ್ನಿಸಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿ ದೂರು ನೀಡಿದಾಗ ಘಟನೆಯು ಬೆಳಕಿಗೆ ಬಂದಿದೆ.
ಕುಟುಂಬದ ಸದಸ್ಯರ ಪ್ರಕಾರ, ಆರೋಪಿಯು ಈ ಪ್ರದೇಶದಲ್ಲಿನ ಮಕ್ಕಳಿಗೆ ಪ್ರಾರ್ಥನೆಗಳನ್ನು ಕಲಿಸುವುದರ ಜತೆಗೆ ಹುಡುಗಿಯರಿಗೆ ತಪ್ಪು ಮಾಡುವಂತೆ ಹೇಳುತ್ತಿದ್ದನು.ಹಲವು ಬಾರಿ ತಮ್ಮ ಮಕ್ಕಳಿಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಪೋಸ್ಕೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಆನಂದ್ ಪ್ರಕಾಶ್ ತಿವಾರಿ ತಿಳಿಸಿದ್ದಾರೆ.(ಏಜೆನ್ಸೀಸ್)