ಕೋಲಾರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿದರು. ಸುನೀಲ್​ ಎಸ್​.ಹೊಸಮನಿ, ರವಿಶಂಕರ್​ ಇದ್ದರು. 
ನ್ಯೂಸ್

ಸರ್ಕಾರಿ ದತ್ತು ಸಂಸ್ಥೆ ಪ್ರಯೋಜನವಾಗಲಿ

ಕೋಲಾರ: ಕುಟುಂಬದ ಪ್ರೀತಿ ವಂಚಿತ, ಅನಾಥ ಹಾಗೂ ನಿರ್ಗತಿಕ ಮಕ್ಕಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸಬೇಕು. ಇದಕ್ಕೆ ಸರ್ಕಾರಿ ದತ್ತು ಸಂಸ್ಥೆಯು ಸೂಕ್ತವಾಗಿದ್ದು, ಇದರ ಪ್ರಯೋಜನ ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚಿಸಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಇಲಾಖೆಯ ವಿವಿಧ ಯೋಜನೆಗಳ ಎರಡನೇ ತೆಮಾಸಿಕ ಸಭೆಯಲ್ಲಿ ಮಾತನಾಡಿ, ಸರ್ಕಾರವು ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ಇಲಾಖೆ ಅಧಿಕಾರಿಗಳು ಕಾರ್ಯಗತಗೊಳಿಸಬೇಕು. ಅದು ಬಿಟ್ಟು ವಿಳಂಬ ನೀತಿ ಪ್ರದರ್ಶಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ದತ್ತು ಸಂಸ್ಥೆಯು -6 ವರ್ಷದೊಳಗಿನ ಪಾಲಕರಿಂದ ವಂಚಿತರಾದ ಮಕ್ಕಳ ಪುನರ್ವಸತಿಗೆ ನೆರವಾಗಲು ಮುಂದಾಗಿದೆ. ಇಂತಹ ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ವೀಕ್ಷಣಾಲಯ ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ 18 ವರ್ಷದೊಳಗಿನ ಮಕ್ಕಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಬಾಕಿ ಇರುವ ಅವಧಿಯಲ್ಲಿ ತಾತ್ಕಾಲಿಕವಾಗಿ ಅಭಿರಕ್ಷಣೆ ಒದಗಿಸಲು ಸಂಸ್ಥೆ ಅನುಕೂಲವಾಗುತ್ತದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದ ಮಕ್ಕಳ ಪ್ರಕರಣ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಘೋಷಣೆಗೆ ಅಗತ್ಯವಿರುವ, ಪಾಲನೆ ಮತ್ತು ರಕ್ಷಣೆಗಾಗಿ, ದೀರ್ಘಾವಧಿ ಪುನರ್ವಸತಿಗಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಬಾಲ ಮಂದಿರ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒಟ್ಟು 42 ಮಕ್ಕಳು ದಾಖಲಾಗಿದ್ದಾರೆ ಎಂದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್​-&19ರಿಂದ ಪಾಲಕರನ್ನು ಕಳೆದುಕೊಂಡ 8 ಮಕ್ಕಳಿಗೆ ಮಾಸಿಕ 3,500 ರೂ. ಆರ್ಥಿಕ ಧನ ಸಹಾಯ ಆರ್​ಟಿಜಿಎಸ್​ ಮುಖಾಂತರ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗುತ್ತಿದೆ. ಪಿಎಂ ಕೇರ್​ ಫಾರ್​ ಚಿಲ್ಡನ್​ ಯೋಜನೆಯಡಿ ಮಕ್ಕಳ ಮಾಹಿತಿಯನ್ನು ಪಿ.ಎಂ. ಕೇರ್​ ಪೋರ್ಟಲ್​ನಲ್ಲಿ ಅಳವಡಿಸಲಾಗಿದ್ದು, ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಯಾವುದೇ ರೀತಿಯ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆ, ಪೋಷಣೆ ಅಗತ್ಯವಿರುವ ಮಕ್ಕಳಿಗೆ ತುರ್ತು ಸೇವೆ ಒದಗಿಸಲು. ಇದಕ್ಕೆ ಮಕ್ಕಳ ಸಹಾಯವಾಣಿ- 1098ನ್ನು ಇ.ಆರ್​.ಎಸ್​.ಎಸ್​ -112 ನೊಂದಿಗೆ ವಿಲೀನಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

6 ವರ್ಷ ವಯಸ್ಸಿನ ಮೇಲ್ಪಟ್ಟ ಬಾಲಕ-&ಬಾಲಕಿಯರನ್ನು ಸ್ಥಳಿಯ ಮುರಾರ್ಜಿ ದೇಸಾಯಿ ಶಾಲೆಗಳಲ್ಲಿ ದಾಖಲು ಮಾಡಲು ಕ್ರಮಕೈಗೊಳ್ಳಬೇಕು. ಈಗಾಗಲೇ 1,108 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇದ್ದು, ಉಳಿದ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಉಪಕಾರ ಯೋಜನೆ, ಪ್ರಾಯೋಜಕತ್ವ ಯೋಜನೆ, ಪೋಕ್ಸೋ ಕಾಯ್ದೆಯಡಿ ಪರಿಹಾರ ಯೋಜನೆ, ಬಾಲನ್ಯಾಯ ಯೋಜನೆ, ಬಾಲ್ಯವಿವಾಹ ತಡೆ ಯೋಜನೆ, ಭಿಕ್ಷಟನಾ ನಿಮೂರ್ಲನಾ ಯೋಜನೆ, ಬಾಲ ಕಾರ್ಮಿಕರ ಕಾಯ್ದೆ, ಮಕ್ಕಳ ಸಹಾಯವಾಣಿ ಪ್ರಕರಣಗಳು, ಕುಟುಂಬ ದೌರ್ಜನ್ಯ ತಡೆ ಯೋಜನೆ, ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ, ಸಖಿ ಒನ್​ ಸ್ಟಾಪ್​ ಯೋಜನೆ, ಸ್ವಾದರಗೃಹ ಯೋಜನೆ, ಪೋಷಣ್​ ಅಭಿಯಾನ, ಮಿಷನ್​ ಶಕ್ತಿ ಯೋಜನೆ, ಮಾತೃವಂದನ ಮತ್ತು ಗೃಹಲಕ್ಷಿ$್ಮ ಯೋಜನೆ ಸೇರಿ ಇತರೆ ಯೋಜನೆಗಳ ಕುರಿತು ಪ್ರಗತಿ ಪರಶೀಲನೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಎಸ್​.ಹೊಸಮನಿ, ಹೆಚ್ಚುವರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರವಿಶಂಕರ್​, ಕೆಜಿಎಫ್​ ಡಿಎಸ್​ಪಿ ಪಾಂಡುರಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಇದ್ದರು.