ನ್ಯೂಸ್

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಬೇಡಿಕೆ; ಸಿಎಂ ಜತೆ ಚರ್ಚಿಸಲಾಗುವುದು: ಎಂ.ಬಿ. ಪಾಟೀಲ

ಬೆಂಗಳೂರು: ರಾಜ್ಯ ರಾಜಧಾನಿಯ ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡುವಂತೆ ಇದೀಗ ಬೇಡಿಕೆಗಳು ಕೇಳಿಬಂದಿದ್ದು, ಈ ಕುರಿತಂತೆ ಸಿಎಂ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್​ ಹೇಳಿದ್ದಾರೆ.

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಬೇಕು ಎಂಬ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಂ.ಬಿ.ಪಾಟೀಲ ಹೇಳಿದರು.

ಈ ಬಗ್ಗೆ ಮಾತನಾಡಿದ ಸಚಿವರು, "ನಮ್ಮ ಮೆಟ್ರೊಗೆ ಬಸವೇಶ್ವರರ ಹೆಸರಿಡಬೇಕು ಎಂಬ ಬೇಡಿಕೆಗಳು ಕೇಳಿಬಂದಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಟ್ಟಂತೆ ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು" ಎಂದರು.

ವಿಜಯಪುರ ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಎಂದು ಹೆಸರಿಡುವಂತೆ ಅನೇಕರು ಕೇಳಿದ್ದಾರೆ. ಬಸವೇಶ್ವರರ ಹೆಸರು ಇಡಲು ಯಾರ ವಿರೋಧವೂ ಇಲ್ಲ. ನಾನು ಬಸವಣ್ಣನವರ ಅಪ್ಪಟ್ಟ ಅನುಯಾಯಿ, ಎಲ್ಲಾ ವಿಷಯಗಳ ಬಗ್ಗೆ ಆಲೋಚಿಸಿ, ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.