ನ್ಯೂಸ್

ವೈದ್ಯಕೀಯ ಸೀಟು ಹಂಚಿಕೆ ಫಲಿತಾಂಶ ಮುಂದೂಡಿಕೆ: ಕಾರಣ ತಿಳಿಸಿದ ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅ.29ರ ನಂತರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ತಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

3ನೇ ಸುತ್ತಿಗೆ ಲಭ್ಯವಾದ ಹೆಚ್ಚುವರಿ ವೈದ್ಯಕೀಯ ಸೀಟುಗಳ ಹಂಚಿಕೆ ಸಂಬಂಧದ ಪ್ರಕರಣ ಹೈಕೋರ್ಟ್‌ನಲ್ಲಿ ಅಂದು ವಿಚಾರಣೆಗೆ ಬರಲಿದ್ದು, ಆ ನಂತರವೇ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿ, ಪಶು ಸಂಗೋಪನೆ ಕೋರ್ಸ್ ಬಾಕಿ ಸೀಟಿಗೆ ಮತ್ತೊಂದು ಸುತ್ತು ಕೌನ್ಸೆಲಿಂಗ್ ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನ ಪದವಿ ಕೋರ್ಸ್‌ಗಳಲ್ಲಿ ಉಳಿದಿರುವ ಕೆಲವು ಸೀಟುಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಆಪ್ಷನ್ಸ್ ದಾಖಲಿಸಲು ಅ.27ರಿಂದ ಅ.29ರವರೆಗೆ ಅವಕಾಶ ನೀಡಲಾಗಿದೆ. ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಯಾರೆಲ್ಲ ಅರ್ಹರು?

ಕೃಷಿ ವಿಜ್ಞಾನ ಹಾಗೂ ಪಶು ವೈದ್ಯಕೀಯ ಕೋರ್ಸ್‌ಗೆ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು ಮಾತ್ರ ಈ ಸುತ್ತಿನಲ್ಲಿ ಭಾಗವಹಿಸಬಹುದು. ಈ ಕೋರ್ಸ್‌ಗಳಿಗೆ ಸೀಟು ಹಂಚಿಕೆ ನಂತರ ರದ್ದುಪಡಿಸಿಕೊಂಡವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ ಎಂದು ಅವರು ತಿಳಿಸಿದರು.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಸೇರಿರುವವರು ಕೂಡ ಅರ್ಹರಲ್ಲ. ಈ ಕೋರ್ಸ್ ಗಳ ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಇಚ್ಛಿಸುವವರು 35 ಸಾವಿರ ರೂ. ಮುಂಗಡ ಪಾವತಿ ಮಾಡಬೇಕು ಎಂದು ಹೇಳಿದ್ದಾರೆ.