ಬೆಂಗಳೂರು: ಕೇಂದ್ರದ ಸ್ಥಾಯಿ ಸಮಿತಿಯನ್ನು ರಚಿಸಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಸಂಸತ್ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: SCSP TSP Scheme: ರಾಷ್ಟ್ರಮಟ್ಟದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲು
ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್ಗೆ ಅಭಿನಂದನೆ ತಿಳಿಸಿದೆ. ಬಿಜೆಪಿಯ ಭರ್ತೃಹರಿ ಮಹತಾಬ್ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಶಶಿ ತರೂರ್ ಅವರನ್ನುವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.