ಎನ್.ಆರ್.ಪುರ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯಸ್ಮರಣೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡಿದರು. 
ನ್ಯೂಸ್

ದೇಶದ ಅಭಿವೃದ್ಧಿಗೆ ಭದ್ರ ಬುನಾದಿ

ಎನ್.ಆರ್.ಪುರ: ದೇಶದ ಅಭಿವೃದ್ಧಿಗಾಗಿ ಭದ್ರ ಬುನಾದಿ ಹಾಕಿ ಕೊಟ್ಟವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಜನರ ಶ್ರೇಯೋಭಿವೃದ್ಧಿಗಾಗಿ 20 ಅಂಶಗಳ ಕಾರ್ಯಕ್ರಮ ಜಾರಿಗೆ ತಂದವರು ಇಂದಿರಾ ಗಾಂಧಿ. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಬಡವರು ಕೂಡ ಬ್ಯಾಂಕ್‌ಗಳಲ್ಲಿ ವ್ಯವಹರಿಸುವಂತೆ ಮಾಡಿದ್ದಾರೆ. ಜೀತಪದ್ಧತಿಯನ್ನು ಮುಕ್ತಿಗೊಳಿಸಿದ ಕೀರ್ತಿ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ. ಅವರ ದಿಟ್ಟತನದ ನಿರ್ಧಾರಗಳು ಇಂದಿಗೂ ಅನುಕರಣೀಯ ಎಂದರು.
ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್ ನಟರಾಜ್, ಯೂತ್ ಕಾಂಗ್ರೆಸ್ ಅಧ್ಯಕ್ಷ ದೇವಂತ್ ಗೌಡ, ಮುಖಂಡರಾದ ಎಸ್.ಡಿ.ರಾಜೇಂದ್ರ, ಪ್ರಶಾಂತ್ ಎಲ್. ಶೆಟ್ಟಿ, ಜುಬೇದಾ, ಸುರಯ್ಯ ಬಾನು, ಕುಮಾರಸ್ವಾಮಿ, ಈಚಿಕೆರೆ ಸುಂದರೇಶ್, ಇ.ಸಿ.ಜೋಯಿ, ಬೆನ್ನಿ, ಕರುಗುಂದ ನಂದೀಶ್, ನರೇಂದ್ರ, ಗಂಗಾಧರ್, ಕೆ.ಎ.ಅಬೂಬೇಕರ್, ಸಮೀರಾ ನಯೀಂ, ಎನ್.ಪಿ.ರಮೇಶ್ ಇತರರಿದ್ದರು.