ಮೆಸ್ಕಾಂ 
ನ್ಯೂಸ್

ಅ.4ರಿಂದ ಮೆಸ್ಕಾಂ ಆನ್‌ಲೈನ್ ಸೇವೆ ತಾತ್ಕಾಲಿಕ ಅಲಭ್ಯ

ಶಿವಮೊಗ್ಗ: ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಂಡಿದ್ದು, ಅ.4ರಿಂದ 7ರವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ಆನ್‌ಲೈನ್ ಸೇವೆಗಳು ತಾತ್ಕಲಿಕವಾಗಿ ಸ್ಥಗಿತಗೊಳ್ಳಲಿವೆ.

ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳ ಗ್ರಾಹಕರಿಗೆ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆ್ಯಪ್ ಇತ್ಯಾದಿ ಸೇವೆಯು ಲಭ್ಯವಿರುವುದಿಲ್ಲ. ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.