ನವದೆಹಲಿ: ಇತ್ತೀಚಿಗೆ ಪಶ್ಚಿಮ ಬಂಗಾಳ, ಬಿಹಾರದಲ್ಲಿ ರಾಮನವಮಿ ಮೆರವಣಿಗೆ ವೇಳೆ ಉಂಟಾದ ಘರ್ಷಣೆಗಳ ಬೆನ್ನಲ್ಲೇ ಹನುಮ ಜಯಂತಿ ಮುನ್ನವೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆಯನ್ನು ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಗೃಹ ಇಲಾಖೆಯೂ ಹನುಮ ಜಯಂತಿ ಬೆನ್ನಲ್ಲೇ ರಾಜ್ಯ ಸರ್ಕಾರಗಳಿಗೆ ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ಬಾರದಂತೆ ನೋಡಿಕೊಳ್ಳಬೇಕು.
ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ನಿಗಾ ವಹಿಸಬೇಕು ಈ ನಿಟ್ಟಿನಲ್ಲಿ ಆಯಾ ರಾಜ್ಯಗಳು ಕಾನೂನು ಸುವ್ಯಸ್ಥೆಗೆ ಧಕ್ಕೆ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.