ಬೆಂಗಳೂರು: ಕೆಜಿಎಫ್ ಸಿನಿಮಾದ ನಂತರ ಯಶ್ ಅಭಿನಯದ ಮುಂಬರುವ ಟಾಕ್ಸಿಕ್(TOXIC) ಸಿನಿಮಾ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿತ್ತು. ಇತ್ತೀಚೆಗೆ ದಿನದ ಆಧಾರದ ಮೇಲೆ ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿನ್ನು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆಗೆ ನೀಡಿದೆ. ಆದರೆ ಸಿನಿಮಾ ಶೂಟಿಂಗ್ಗಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ (ಅಕ್ಟೋಬರ್ 29) ತಿಳಿಸಿದ್ದಾರೆ.
ಇದನ್ನು ಓದಿ: ಯೂಟ್ಯೂಬರ್ಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅಭಿನವ್ ಅರೋರಾ ತಾಯಿ; ಕಾರಣ ಹೀಗಿದೆ | Abhinav Arora
ಅರಣ್ಯ ಭೂಮಿಯಲ್ಲಿ ಟಾಕ್ಸಿಕ್' ಸಿನಿಮಾದ ಚಿತ್ರೀಕರಣ ಹಲವು ತಿಂಗಳಿನಿಂದ ನಡೆಯುತ್ತಿದ್ದು ಬೃಹತ್ ಸೆಟ್ ಹಾಕಲಾಗಿದೆ. ಇದಕ್ಕಾಗಿ ಇಲ್ಲಿದ್ದ ನೂರಾರು ಮರ -ಗಿಡ ಕಡಿಯಲಾಗಿದೆ. ನಿಯಮಾನುಸಾರ ಅನುಮತಿ ಇಲ್ಲದೆ ಇಲ್ಲದೆ ಮರ ಕಡಿಯುವುದು ಅದರಲ್ಲೂ ಅರಣ್ಯ ಭೂಮಿಯಲ್ಲಿ ಮರ ಗಿಡಗಳ ಅಕ್ರಮ ಕಡಿತಲೆ ದಂಡನೀಯ ಅಪರಾಧ ಆಗಿರುತ್ತದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದೆ ಎಂದು ತಿಳಿಸಿದರು.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಮರ ಕಡಿದಿರುವ ಆರೋಪದ ಕುರಿತು ಟಾಕ್ಸಿಕ್ ಚಿತ್ರತಂಡದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.