ನ್ಯೂಸ್

ಜಿಲ್ಲೆಯಲ್ಲಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಮಾ. 15 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10ಕ್ಕೆ ಕೆಆರ್​ಐಡಿಎಲ್​ನಿಂದ 25 ಲ ರೂಗಳ ವೆಚ್ಚದಲ್ಲಿ ಆರ್​ಐಡಿಎಫ್​ ಯೋಜನೆಯಡಿ ರೈತ ಸಂಪರ್ಕ ಕೇಂದ್ರದಲ್ಲಿ ಗೋದಾಮು ಕಟ್ಟಡ ಉದ್ಘಾಟಿಸುವರು. ಪಟ್ಟಣ ಪಂಚಾಯಿತಿ ವತಿಯಿಂದ 264 ಲ ರೂಗಳ ವೆಚ್ಚದಲ್ಲಿ ವಿವಿಧ 9 ಕಾಮಗಾರಿಗಳಿಗೆ ಭೂಮಿಪೂಜೆ, ಬಬಲೇಶ್ವರ ತಾಪಂ ವತಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ 45 ಹೊಲಿಗೆ ಯಂತ್ರ ವಿತರಣೆ, ಆರೋಗ್ಯ ಇಲಾಖೆ ವತಿಯಿಂದ 250 ಲ ರೂಗಳಲ್ಲಿ ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಶಂಕುಸ್ಥಾಪನೆ ನೆರವೇರಿಸುವರು.

ನಂತರ ಸಮಾಜ ಕಲ್ಯಾಣ ಇಲಾಖೆಯಿಂದ 17 ಕೋಟಿ ರೂಗಳ ವೆಚ್ಚದಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ ಶಂಕುಸ್ಥಾಪನೆ, ಕಂದಾಯ ಇಲಾಖೆಯಿಂದ ಬಬಲೇಶ್ವರ ತಾಲೂಕಿನ ಭೂ&ಮಾಪನ (ಸರ್ವೇ ಆಫೀಸ್​) ಎಡಿಎಲ್​ಆರ್​ ಕಚೇರಿ ಉದ್ಘಾಟಿಸಿದ ಬಳಿಕ ಬಬಲೇಶ್ವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯರ ಕಾರ್ಯಾಲಯ ಕಾರ್ಯಾರಂಭಕ್ಕೆ ಚಾಲನೆ ನೀಡುವರು.

ಟಕ್ಕಳಕಿ ಗ್ರಾಮದಲ್ಲಿ ವಿಜಯಪುರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ವತಿಯಿಂದ ಹಮ್ಮಿಕೊಂಡಿರುವ ರೈತರ ಸಮಾವೇಶದಲ್ಲಿ ಭಾಗವಹಿಸುವರು. ತೊರವಿ ಗ್ರಾಮದಲ್ಲಿ ಸಂಜೆ 5.30ಕ್ಕೆ ಪಾಲಿಕೆ ವಿಜಯಪುರ ವ್ಯಾಪ್ತಿಯ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.