????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ನ್ಯೂಸ್

ಗ್ರಾಮಗಳ ನೈರ್ಮಲ್ಯಕ್ಕೆ ಪ್ರಥಮ ಆದ್ಯತೆ ನೀಡಿ

ಎ. ಆರ್. ರಘುರಾಮ

ಬೆಟ್ಟದಪುರ: ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದಲ್ಲಿ ಸ್ವಚ್ಛತೆ ಸೇರಿದಂತೆ ನೈರ್ಮಲ್ಯತೆ ಕಾಪಾಡುವ ಬಗ್ಗೆ ವಿಶೇಷ ಕಾಳಜಿವಹಿಸಬೇಕು ಎಂದು ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದರು.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇರುವುದರಿಂದ ಗ್ರಾಮ ಪಂಚಾಯಿತಿ ಹಣಕಾಸಿನ ಯೋಜನೆಯ ಹಣವನ್ನು ಬೇರೆ ಯಾವುದೇ ಯೋಜನೆಗಳಿಗೆ ಬಳಸುತ್ತಿಲ್ಲ. ಮೂಲಭೂತವಾಗಿ ಗ್ರಾಮಕ್ಕೆ ಬೇಕಾಗಿರುವ ಸ್ವಚ್ಛತೆ, ಕುಡಿಯುವ ನೀರು ಮತ್ತಿತರ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ, ಸಾರ್ವಜನಿರ ಅಲೆದಾಟ ತಪ್ಪಿಸಬೇಕು ಎಂದು ಹೇಳಿದರು.
ತಾಲೂಕಿನಲ್ಲಿ ಕಂದಾಯ, ಅಬಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮುಜುರಾಯಿ, ನಗರ ಮತ್ತು ಪುರಸಭೆ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಯಾರ ಮುಲಾಜಿಗೂ ಬಗ್ಗದೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಅನ್ನಭಾಗ್ಯ, ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರವಾಗಿ ಅವರ ಅಕೌಂ ಗೆ ಯಾವ ಅಡೆತಡೆ ಇಲ್ಲದೇ ಹಣವನ್ನು ನೇರವಾಗಿ ವರ್ಗಾವಣೆಯಾಗುವಂತೆ ಕ್ರಮವಹಿಸಬೇಕು ಎಂದರು.
ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ, ಸಹಕಾರ, ಗಣಿ ಮತ್ತು ಭೂ ವಿಜ್ಞಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಾಕೀತು ಮಾಡಿದರು.
ಸಭೆಯಲ್ಲಿ ಗ್ರಾಮಸ್ಥರು ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಜಮೀನಿಗೆ ರಸ್ತೆ, ದೇವಸ್ಥಾನಗಳು ಹಾಗೂ ಸಮುದಾಯ ಭವನಕ್ಕೆ ಅನುದಾನಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿದರು.
ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಮುಖಂಡರಾದ ಹೊಲದಪ್ಪ, ಕೃಷ್ಣಪ್ಪ, ಕೆಪಿ ವೆಂಕಟೇಶ್, ವಿಜಿ ಕೊಪ್ಪಲು ಲೋಕೇಶ್, ಪುಟ್ಟರಾಜು, ಗ್ರಾಪಂ ಸದಸ್ಯರಾದ ಜಗದೀಶ್, ದೀಪು, ರಾಜಮಣಿ, ತಹಸೀಲ್ದಾರ್ ಕುಂಞ ಅಹಮದ್, ತಾಪಂ ಇಒ ಸುನೀಲ್ ಕುಮಾರ್, ಪಿಡಿಒ ರಾಜಶೇಖರ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಇದ್ದರು.