ಶಿವಮೊಗ್ಗ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೆ.26ರಂದು ಜಿಲ್ಲೆಯ ರೈಲ್ವೆ ಯೋಜನೆಗಳ ಪರಿಶೀಲನೆ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸುವರು.
ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸುವರು. ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿ ಪರಿಶೀಲಿಸುವರು.
ಮಧ್ಯಾಹ್ನ 12ರಿಂದ 1ರವರೆಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಿಂದ ಬೀರೂರಿಗೆ ತೆರಳುವರು.