ನ್ಯೂಸ್

ಸನಾತನ ಹೇಳಿಕೆ ವಿವಾದ; ಸಂವಿಧಾನವೇ ನನ್ನ ಧರ್ಮ ಎಂದ ಸಚಿವ ಪ್ರಿಯಾಂಕ್​ ಖರ್ಗೆ

ಬೆಂಗಳೂರು: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​​ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಧಾರ್ಮಿಕ ಭಾನವೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಉತ್ತರಪ್ರದೇಶದ ರಾಮ್​ಪುರದಲ್ಲಿ FIR ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್​ ಖರ್ಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಉತ್ತರಪ್ರದೇಶದಲ್ಲಿ ನನ್ನ ವಿರುದ್ಧ ಭಕ್ತರು ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರತಿಯೊಂದು ಧರ್ಮವು ಮನುಷ್ಯರ ನಡುವೆ ಭೇದಭಾವ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಆ ಅರ್ಥದಲ್ಲಿ ಮಾತನಾಡಲಾಗಿದೆ. ನಾನು ಕಾನೂನು ಹಾಗೂ ಸಂವಿಧಾನದವನ್ನು ನಂಬುತ್ತೇನೆ. ಸಂವಿಧಾನವೇ ನನ್ನ ಧರ್ಮ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಸನಾತನ ಧರ್ಮದ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಸಚಿವ ಉದಯನಿಧಿ ಸ್ಟಾಲಿನ್​ ಹಾಗೂ ಅವರ ಭಾಷಣವನ್ನು ಸಮರ್ಥಿಸಿಕೊಳ್ಳುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪಿಸಿ ವಕೀಲರಾದ ಹರ್ಷ್​ ಗುಪ್ತಾ​ ಹಾಗೂ ರಾಮ್​ ಸಿಂಗ್​ ಲೋಧಿ ಎಂಬುವವರು ದೂರು ದಾಖಲಿಸಿದ್ದರು. ಸಚಿವರಾದ ಉದಯನಿಧಿ ಸ್ಟಾಲಿನ್​ ಹಾಗೂ ಪ್ರಿಯಾಂಕ್​ ಖರ್ಗೆ ವಿರುದ್ಧ ಭಾರತ ದಂಡ ಸಂಹಿತೆ (IPC Section) 295A, 153A ಅಡಿ FIR ದಾಖಲಿಸಿಕೊಳ್ಳಲಾಗಿದೆ.