ನ್ಯೂಸ್

ಚಿತ್ತಾಪುರದಲ್ಲಿ‌ ಜನರ ಅಹವಾಲು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ; ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ

ಕಲಬುರಗಿ : ಜಿಲ್ಲೆಯ ಚಿತ್ತಾಪುರದಲ್ಲಿ ಇರುವ ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಸ್ಥಳದಲ್ಲಿ ಉಪಸ್ಥಿತರಿದ್ದ ಸರ್ಕಾರದ ವಿವಿಧ ಇಲಾಖೆಗೆ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದ ಸಚಿವರು, ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ಸೂಚಿಸಿದರು.