ನ್ಯೂಸ್

ಚಿಕಿತ್ಸೆ ದೊರೆಯದೆ ಮಹಿಳೆ ಮೃತಪಟ್ಟ ಪ್ರಕರಣ ಪಡೆದುಕೊಂಡಿದೆ ಗಂಭೀರತೆ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಮಹಿಳೆ ಮೃತಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜ್ಯದ ಯಾವುದೇ ಪ್ರದೇಶದಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗದೆ ಮೃತಪಡುವುದನ್ನು ಒಪ್ಪುವುದಿಲ್ಲ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಮಹಿಳೆ ಚಿಕಿತ್ಸೆ ದೊರೆಯದೆ ಮೃತಪಟ್ಟ ಹಿನ್ನೆಲೆಯಲ್ಲಿ ನಾಳೆ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ವೀಡಿಯೋ ಸಂವಾದ ಏರ್ಪಡಿಸಲಾಗಿದೆ. ಇದೇ ಸಮಯದಲ್ಲಿ ಕರೊನಾ ವೈರಸ್​ ಸೋಂಕು ನಿವಾರಣೆ ಕುರಿತು ತಜ್ಞ ವೈದ್ಯರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.