ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನತೆ ಸಮಸ್ಯೆಗಳು ತೀವ್ರಗೊಳ್ಳುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೇವಲ ಕಾರ್ಯಕ್ರಮ, ಸಭೆಗಳಿಗೆ ಸಿಮೀವಾಗಿದ್ದಾರೆ ಹೊರತು ಜನ ಸಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಆರೋಪಿಸಿದರು.
ಸಚಿವರು ಜಿಲ್ಲೆಯ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಅರಿತು ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಸ್ವಾತಂತ್ರೃದಿನಾಚರಣೆ, ಗಣರಾಜ್ಯೋತ್ಸವ, ಕೆಡಿಪಿ ಸಭೆಗಳಿಗೆ ಸಿಮೀತವಾಗಿದ್ದಾರೆ. ಸಚಿವರು ಜಿಲ್ಲೆಯಾದ್ಯಂತ ಪ್ರವಾಸಿ ಮಾಡಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು ಎಂದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ, ಅಡಕೆ, ಕಾಳುಮೆಣಸು ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಯಲು ಸೀಮೆ ಭಾಗದಲ್ಲಿ ಬರ ಪರಿಸ್ಥಿತಿ ಎದುರಾಗುವ ಭೀತಿ ಇದೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ತಮ್ಮ ಕರ್ತವ್ಯ ಮರೆತ್ತಿದ್ದಾರೆ. ಅವರಿಗೆ ಜನರ ಹಿತಕ್ಕಿಂತ ಸ್ವಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ದೂರಿದರು.
ಮೂಡಿಗೆರೆ ತಾಲೂಕಿನ ಮಲೆಮನೆ ಮತ್ತು ಚೆನ್ನಹುಡ್ಲು ಭಾಗದಲ್ಲಿ 2019ರಲ್ಲಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ನಾಲ್ಕು ವರ್ಷ ಕಳೆದರೂ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಸಚಿವರು ಮೂಡಿಗೆರೆಯಲ್ಲಿ ಕುಳಿತು ಸಭೆ ಮಾಡಿ ಹೋಗಿದ್ದಾರೆ ಹೊರತು, ನಿರಾಶ್ರಿತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹಲವು ಭಾರಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವಿದೆ ಎಂದು ಹೇಳಿದ್ದಾರೆ. ಈ ರೀತಿ ಅರಿವು ಇದೆ ಅಂದುಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಇದು ರಾಜಕೀಯ ದ್ವೇಷವನ್ನು ತೋರಿಸುತ್ತದೆ. ನೂರಾರು ಶಿಕ್ಷಣ ತಜ್ಞರ ಜತೆ ಚರ್ಚಿಸಿ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿಯೇ ಕೇಂದ್ರ ಸರ್ಕಾರ ಎನ್‌ಇಪಿಯನ್ನು ಜಾರಿಗೆ ತಂದಿದೆ. ಶಾಲಾ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಎಲ್ಲ ರೀತಿ ಸಿದ್ದತೆಗಳನ್ನು ಕೈಗೊಂಡಿದ್ದಾರೆ. ಕೂಡಲೇ ಸರ್ಕಾರ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಮಂಜುನಾಥ್, ದಿನೇಶ್ ಹಾಜರಿದ್ದರು.