ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ ಮುಸ್ಲಿಂ ಬಾಲಕ!

ವಿಜಯಪುರ: ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಪ್ ಸ್ಟೇಟಸ್ ಬಾಲಕನನ್ನು ಚಡಚಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಾಲಕ ಶಿವಾಜಿ ಮಹಾರಾಜರ ಫೋಟೋಗಳನ್ನ ಅಶ್ಲೀಲವಾಗಿ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇದು ವೈರಲ್ ಆಗುತ್ತಿದ್ದಂತೆ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕನಿಂದ ಈ ಕೃತ್ಯ ಎಸಗಿದ್ದು, ಶಿವಾಜಿ ಮಹಾರಾಜರನ್ನು ಅಶ್ಲೀಲವಾಗಿ ನಿಂದಿಸಿದ್ದಾನೆ. ಸೋಮವಾರ(ಜ.30) ತಡರಾತ್ರಿ ಈ ಘಟನೆ ನಡೆದಿದೆ. ಬಾಲಕನ ಕೃತ್ಯವನ್ನು ಖಂಡಿಸಿ, ಹಿಂದು ಕಾರ್ಯಕರ್ತರು ನಗರದ ಶಿವಾಜಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಬಾಲಕನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 153A ಅಡಿಯಲ್ಲಿ ಪ್ರಕರಣ ದಾಖಲಾಗಿದೆ.