ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಮಂಗಳವಾರ ಮಂಗಳೂರಿಗೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಂಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ 200 ಕೋಟಿ ರೂ.ಗಳ ದೇಣಿಗೆ ಹುಂಡಿ ಹಣ ದುರುಪಯೋಗ ಅಥವಾ ಕಳ್ಳತನ ಆಗಿರುವ ವರದಿಯಿಂದ ಬಿಜೆಪಿಗೆ ಯಾವುದೇ ಧಾರ್ಮಿಕ ಬದ್ಧತೆ, ಗೌರವ ಇಲ್ಲ ಎಂಬುದು ಸಾಬೀತಾಗಿದೆ. ಸಂಪೂರ್ಣ ಅಯೋಧ್ಯೆಯನ್ನು ಬಿಜೆಪಿಯವರು ವ್ಯವಹಾರವಾಗಿ ಮಾರ್ಪಡಿಸಿದ್ದು, ದೇಶದ ಭಕ್ತರು ನೀಡಿರುವ ಹಣವನ್ನು ದೋಚುತ್ತಿದ್ದಾರೆ. ಇದು ದುರದೃಷ್ಟಕರ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಭಿಪ್ರಾಯಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಮಂಗಳವಾರ ಮಂಗಳೂರಿಗೆ ಆಗಮಿಸಿರುವ ಅವರು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಯೋಧ್ಯೆ ಹಣ ದುರುಪಯೋಗ ಕುರಿತಂತೆ ಎಸ್‌ಐಟಿ ತನಿಖೆಯಿಂದ ಸೂಕ್ತ ಫಲಿತಾಂಶ ದೊರಕದು. ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಈ ಬಗ್ಗೆ ತನಿಖೆ ಆಗಬೇಕು. ಅಯೋಧ್ಯೆ ಪ್ರಕರಣದಿಂದಾಗಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಅಯೋಧ್ಯೆ ರಾಮ ಮಂದಿರದಿಂದ ಹಣವನ್ನು ದೋಚಿರುವುದು ದುರದೃಷ್ಟಕರ ಮಾತ್ರವಲ್ಲ, ನಾಚಿಕೆಗೇಡಿನ ವಿಚಾರ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.
2008ರಿಂದ ಬಿಜೆಪಿಯವರು ಅಪರೇಶನ್ ಕಮಲ ಎಂಬ ಹೆಸರಿನಲ್ಲಿ ಶಾಸಕರನ್ನು ಖರೀದಿಸುವ ಪ್ರಕ್ರಿಯೆ ನಡೆಸುತ್ತಾ ಬಂದಿದ್ದಾರೆ. ಅಪರೇಶನ್ ಕಮಲದ ಮೂಲಕ ಅವರು ಶಾಸಕರು ಮತ್ತು ಸಂಸದರನ್ನು ಖರೀದಿಸುವ, ಮಾರಾಟ ಮಾಡುವ ಪ್ರಕ್ರಿಯೆ ನಡೆಸುತ್ತಾ ಬರುತ್ತಿದ್ದಾರೆ. ಪಶ್ಚಿಮ ಬಂಗಾಲದಲ್ಲಿಯೂ 2 ಡಜನ್ ಶಾಸಕರನ್ನು ಖರೀದಿಸಿದ್ದಾರೆ. ಡಜನ್ ರಾಜ್ಯಸಭಾ ಸಂಸದರನ್ನು ಖರೀದಿಸಿದ್ದಾರೆ. ಅದನ್ನೇ ಅವರು ಮಾಡುತ್ತಾ ಬಂದಿರುವುದು ಎಂದು ಬಿಜೆಪಿಯ ಈಶ್ವರಪ್ಪ ಅವರ ಹೇಳಿಕೆ ಕುರಿತಾ ಪ್ರಶ್ನೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದರು.
ಕರಾವಳಿಯಲ್ಲಿ ಶಾಂತಿಯುತ ವಾತಾವರಣ
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಪ್ರಸ್ತುತ ಶಾಂತಿಯುತ ವಾತಾವರಣ ನೆಲೆಸಿದ್ದು, ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರಿಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಧನ್ಯವಾದ ಸಮರ್ಪಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಸಾಚಾರಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದ ಎರಡನೇ ಇನ್ನಿಂಗ್ಸ್ ಆರಂಭವಾಗಿದ್ದು, ಶೀಘ್ರದಲ್ಲೇ ಕೇಂದ್ರದ ವೀಕ್ಷಕರು ಭೇಟಿ ನೀಡಿ ಹೊಸ ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದಾರೆ ಎಂದರು. ಇದೇ ವೇಳೆ ಚುನಾವಣಾ ಆಯೋಗದ ವಿರುದ್ಧ ಹರಿಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಆಯೋಗವು ಬಿಜೆಪಿ ಅಡಿಯಾಳಾಗಿ ಕೆಲಸ ಮಾಡುತ್ತಿದೆ. ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಕೈಬಿಟ್ಟು ಹೋದವರ ದಾಖಲಾತಿಗಾಗಿ ಮತ್ತೆ ಡ್ರೈವ್ ನಡೆಸುವಂತೆ ಆಯುಕ್ತರ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಇನ್ನು ಶಾಸಕರ ಕುದುರೆ ವ್ಯಾಪಾರದ ಕುರಿತ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಿಜೆಪಿ ಶಾಸಕರೇ ಆತ್ಮಸಾಕ್ಷಿಯಾಗಿ ವೋಟು ಮಾಡುವುದಾಗಿ ಹೇಳಿದ್ದರು ಎಂದರಲ್ಲದೆ, ಬಿಜೆಪಿ-ಜೆಡಿಎಸ್ ಪಕ್ಷಗಳು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿವೆ ಎಂದರು. ಬಿಡದಿ ಟೌನ್‌ಶಿಪ್ ವಿಳಂಬಕ್ಕೆ ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ ಅವರು, ಸಮಸ್ಯೆ ಹೆಚ್ಚಾದರೆ ತಾವೇ ಖುದ್ದಾಗಿ ಅಲ್ಲಿಗೆ ಭೇಟಿ ನೀಡುವುದಾಗಿ ಎಚ್ಚರಿಸಿದರು.