ನ್ಯೂಸ್

ಶಾಲೆಗೆ ಹುಸಿ ಬಾಂಬ್ ಸಂದೇಶ ಕಳುಹಿಸಿದ ದುಷ್ಕರ್ಮಿಗಳು

ಬೆಂಗಳೂರು: ದುಷ್ಕರ್ಮಿಗಳು ಶಾಲೆಗಳಿಗೆ ಹುಸಿ ಬಾಂಬ್ ಸಂದೇಶಗಳನ್ನು ಕಳುಹಿಸುವುದನ್ನು ಮುಂದುವರಿಸಿದ್ದಾರೆ.
ನಾಗವಾರದ ಖಾಸಗಿ ಶಾಲೆಯೊಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಶಾಲೆಯಲ್ಲಿ ಇಂಚಿಂಚೂ ತಪಾಸಣೆ ನಡೆಸಿದ್ದರು ಆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ಖಚಿತಪಡಿಸಿದ್ದರು. ಹುಸಿ ಬಾಂಬ್ ಸಂದೇಶ ಎಂದು ತಿಳಿದ ಶಾಲೆಯವರು ನಿಟ್ಟುಸಿರು ಬಿಟ್ಟರು.
ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್ ಪಾರ್ಕ್ ಮುಂಭಾಗದಲ್ಲಿರುವ ದಿ ನ್ಯೂ ಇಂಡಿಯನ್ ಪಬ್ಲಿಕ್ ಶಾಲೆಗೆ ದುಷ್ಕರ್ಮಿಗಳು ಗುರುವಾರ ಮುಂಜಾನೆ ೬.೫೭ ಕ್ಕೆ ಇ-ಮೇಲ್ ಮಾಡಿದ್ದು, ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ಗಳನ್ನು ಇಡಲಾಗಿದೆ. ಅದು ಮಧ್ಯಾಹ್ನ ೧.೩೦ಕ್ಕೆ ಬಾಂಬ್ ಸ್ಫೋಟಗೊಳಲಿದೆ ಎಂದು ಫಾದರ್ ಕೊಡಾಚಿ ಹೆಸರಿನ ್ಚಟ್ಝಜಟಠಿ೪೫೬ಃಜಞಜ್ಝಿ.್ಚಟಞ ಹಾಗೂ ಚಿಜ್ಟ್ಞಿಟ್ಟಠಿಃಠಿಜಿಜ್ಝಟಚಿಚ್ಝ.್ಞಛಿಠಿ ಎಂಬ ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಕಳುಹಿಸಿದ್ದರು. ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿಯು ಕೂಡಲೇ ಮಕ್ಕಳಿಗೆ ರಜೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಸ್ಕ್ವಾಡ್‌ನವರು ಎಲ್ಲಾ ಕಡೆ ಪರಿಶೀಲಿಸಿದಾಗ ಇದೊಂದು ಹುಸಿ ಬಾಂಬ್ ಸಂದೇಶ ಎಮಬುದು ಗೊತ್ತಾಗಿದೆ. ಶಾಲೆಯ ಆಡಳಿತಾಧಿಕಾರಿ ನೀಡಿದ ದೂರಿನ ಮೇರೆಗೆ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.