ನ್ಯೂಸ್

ರೀಲ್ಸ್ ಮಾಡ್ತಾ ಫುಲ್‌ ಆಕ್ಟೀವ್ ಇದ್ದ ಟೀಚರ್​ ಶವವಾಗಿ ಪತ್ತೆ.. ಆಗಿದ್ದೇನು?

ಮಂಡ್ಯ: ಜನವರಿ 20 ಕಾಣೆಯಾಗಿದ್ದ ಶಿಕ್ಷಕಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ದೀಪಿಕಾ(28) ಮೃತ ಟೀಚರ್​. ಈಕೆಯ ದೇಹ ಮೇಲುಕೋಟೆಯ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಮೃತ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ದೀಪಿಕಾಗೆ 8-ವರ್ಷ ವಯಸ್ಸಿನ ಮಗ ಇದ್ದಾನೆ.

ಮೂಲಗಳ ಪ್ರಕಾರ, ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಶನಿವಾರದಂದು ಶಾಲೆಗೆ ಹೋಗಿದ್ದ ದೀಪಿಕಾ ಸಂಜೆಯಾದರೂ ಮನೆನಗೆ ಬಾರದೇ ಹೋದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು ಮತ್ತು ಮೇಲಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋಮವಾರ ಸಾಯಂಕಾಲ ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಶಿಕ್ಷಕಿಯ ಮೃತದೇಹ ಪತ್ತೆಯಾಗಿದೆ. ದೀಪಿಕಾ ಕೊಲೆಯಾಗಿರಬಹುದಾದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.