ಕುಡುಮಲ್ಲಿಗೆಯ ಸರ್ಕಾರಿ ಶಾಲೆಯಲ್ಲಿ ಆರಂಭಗೊಂಡ ಪೂರ್ವ ಪ್ರಾಥಮಿಕ ಶಾಲೆಯನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ಆರ್.ಎಂ.ಮಂಜುನಾಥಗೌಡ, ಅಂಜೂರ ಕುಡುಮಲ್ಲಿಗೆ ಇತರರಿದ್ದರು. 
ನ್ಯೂಸ್

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅವಶ್ಯ

ತೀರ್ಥಹಳ್ಳಿ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಮುಖ್ಯವಾಗಿ ಸಂಸ್ಕಾರ ಮತ್ತು ಮೌಲ್ಯಾಧಾರಿತ ಶಿಕ್ಷಣ ಕೊಡಸಬೇಕು. ಕೇವಲ ಅಂಕಗಳಷ್ಟೇ ವಿದ್ಯಾರ್ಥಿಗಳನ್ನು ಅಳೆಯುವ ಮಾನದಂಡ ಆಗಬಾರದು ಎಂದು ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
ತಾಲೂಕಿನ ಕುಡುಮಲ್ಲಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿ ಶಾಲೆಯಲ್ಲಿ ಸೋಮವಾರ ಆರಂಭಗೊಂಡ ಆಂಗ್ಲ ಮಾಧ್ಯಮದ ಪೂರ್ವ ಪ್ರಾಥಮಿಕ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಕೆಲ ವರ್ಷಗಳ ಹಿಂದೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದೇ ಸಾಧನೆ ಎಂಬ ವಾತಾವರಣವಿತ್ತು. ಆದರೆ ಪ್ರಸ್ತುತ ಗುಣಮಟ್ಟದ ಶಿಕ್ಷಣವೇ ಇಳಿಮುಖ ಆಗುತ್ತಿದ್ದು ಅಂಕ ಗಳಿಕೆಗೆ ಆದ್ಯತೆ ನೀಡಲಾಗುತ್ತಿದೆ. ಆದರೆ ಜೀವನ ಪಾಠ ಸಿಗುತ್ತಿಲ್ಲ. ಭವಿಷ್ಯದ ದೃಷ್ಟಿಯಿಂದ ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಅಂಜೂರ ಕುಡುಮಲ್ಲಿಗೆ, ಶಾಲಾ ಸಮಿತಿ ಅಧ್ಯಕ್ಷ ಸಂತೋಷ್, ಗ್ರಾಪಂ ಅಧ್ಯಕ್ಷ ರಾಜೇಶ್, ಪ್ರಶಾಂತ್ ಕುಕ್ಕೆ, ರಘು, ಶ್ಯಾಮ ಶೆಟ್ಟಿ, ವಿದ್ಯಾ ನಾರಾಯಣ್ ಇದ್ದರು.