ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸ್ಥಾನಗಳಗೆ ಇಂದು (ಜುಲೈ.4ರ) ನಡೆದಿದ್ದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸಿ.ಎನ್ ಬಾಲಕೃಷ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಇಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಡಾ. ಆರ್.ಪ್ರಕಾಶ್, ರಾಘವೇಂದ್ರ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಸಿ.ದೇವರಾಜ್, ಸಹಾಯಕ ಕಾರ್ಯದರ್ಶಿಯಾಗಿ ಆರ್.ಹನುಮಂತರಾಯಪ್ಪ, ಖಜಾಂಚಿ ಆಗಿ ಎಂ.ಎಸ್. ಉಮಾಪತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಮತ್ತು ಖಜಾಂಚಿ ಸ್ಥಾನಗಳಿಗೆ ನಡೆದ ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸಿರುವುದರಿಂದ ಈ ಕೆಳಕಂಡ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.