ನ್ಯೂಸ್

50 ಶಾಸಕರಿಗೆ 50 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

Bengaluru - Political - Shivananda Tagadur

ಬೆಂಗಳೂರು:

ಐವತ್ತು ಜನ ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು.

ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಸಿಎಂ ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ ಎಂದು ಹೇಳಿದರು.

ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಆರೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ ಈ ಪ್ರತಿಕ್ರಿಯೆ ನೀಡಿದರು.