ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್.ಎ. ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ ಪ್ರಸಂಗವೊಂದು ನಡೆದ. ರಾಜಕೀಯ ಭಾಷಣ ವೇಳೆ ಹ್ಯಾರಿಸ್ ಈ ಎಡವಟ್ಟು ಮಾಡಿಕೊಂಡಿದ್ದು, ವಿವಾದವಾಗಿ ಪರಿಣಮಿಸುವ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.
ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ
ಸಾರ್ವಜನಿಕರನ್ನು ಉದ್ದೇಶಿಸಿ ರಾಜಕೀಯವಾಗಿ ಮಾತನಾಡುತ್ತಿದ್ದ ಹ್ಯಾರಿಸ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ 'ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು' ಎಂಬುದಾಗಿ ಹೇಳಿದ್ದಾರೆ.
ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ನಾಳೆ ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿದ್ದು, ಇದರ ಸುಳಿವು ಸಿಗುತ್ತಿದ್ದಂತೆ ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ ಎಂದಿರುವ ಹ್ಯಾರಿಸ್ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಹ್ಯಾರಿಸ್ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ಹಿಂಪಡೆಯಲಾಗಿದೆ ಎನ್ನಲಾಗಿದೆ.