ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಚೇರಿಯಲ್ಲಿ ಆಯೋಜಿಸಿದ್ದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರು. ಲಕ್ಷ್ಮಣ್, ಸತೀಶ್, ಲೋಕೇಶ್ ಇದ್ದರು. 
ನ್ಯೂಸ್

ಬ್ಲಾಕ್ ಕಾಂಗ್ರೆಸ್‌ನಿಂದ ಶಾಸಕರಿಗೆ ಸನ್ಮಾನ

ಎಂ.ರವಿ

ಸೋಮವಾರಪೇಟೆ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿ ಎರಡು ವರ್ಷದ ಪೂರೈಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಕಚೇರಿಯಲ್ಲಿ ಶಾಸಕ ಡಾ.ಮಂತರ್‌ಗೌಡ ಅವರನ್ನು ಅಭಿನಂದಿಸಲಾಯಿತು.

ಕಾಂಗ್ರೆಸ್ ಕಾರ್ಯಕರ್ತರ ಶ್ರಮ, ಮತದಾರರ ಆಶೀರ್ವಾದದಿಂದ ಗೆಲುವು ಸಾಧಿಸಿದ್ದೇನೆ. ಕ್ಷೇತ್ರದ ಮತದಾರರ ಋಣವನ್ನ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಮೂಲಕ ತೀರಿಸಬೇಕಾಗಿದೆ. ಪಂಚ ಗ್ಯಾರಂಟಿಗಳ ಮೂಲಕ ರೈತರು, ಬಡವರು ಕೂಲಿ ಕಾರ್ಮಿಕರು ಹಾಗು ಮಹಿಳೆಯರಿಗೆ ಸರ್ಕಾರ ಸಹಾಯ ಮಾಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಹಂತ ಹಂತವಾಗಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ದಾಖಲಿಸುವ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಿದೆ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಡಿಸಿಸಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್ ಶಾಸಕರಿಗೆ ಶುಭ ಕೋರಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶಾಸಕರ ಮನೆಗೆ ಆಗಮಿಸಿ, ಆಶೀರ್ವಾದ ಮಾಡಿದರು. ನಂತರ ಶಾಸಕ ದಂಪತಿ ಪಾದಪೂಜೆ ನೆರವೇರಿಸಿದರು.