ಪಟ್ನಾ: ಚಿಪ್ಸ್ ಹಾಗೂ ಬಿಸ್ಕೆಟ್ಗಳನ್ನು ಕದ್ದರೆಂಬ ಶಂಕೆಯ ಮೇರೆಗೆ ಗುಂಪೊಂದು ನಾಲ್ವರು ಅಪ್ರಾಪ್ತ ಬಾಲಕರನ್ನು ಅಮಾನುಷವಾಗಿ ಥಳಿಸಿರುವ ಘಟನೆ ಬಿಹಾರದ ಬೇಗುಸರೈ ಜಿಲ್ಲೆಯ ಫಾಸಿಲ್ಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ನಾಲ್ವರು ಬಾಲಕರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವೀರ್ಪುರ ಪೊಲೀಸ್ ಠಾಣಾಧಿಕಾರಿ ಪಲ್ಲವ್ ಕುಮಾರ್, ನಾಲ್ವರು ಬಾಲಕರು ಚಿಪ್ಸ್ ಹಾಗೂ ಬಿಸ್ಕೆಟ್ಗಳನ್ನು ಕದ್ದರೆಂಬ ಶಂಕೆಯ ಮೇರೆಗೆ ಅಂಗಡಿಯ ಮಾಲೀಕ ಸೇರಿದಂತೆ ಫಾಸಿಲ್ಪುರ ಗ್ರಾಮದ ಜನರು ಅವರನ್ನು ಮನಬಂದ.ತೆ ಥಳಿಸಿದ್ದಾರೆ. ವಿಚಾರ ತಿಳಿದು ಅಧಿಕಾರಿಗಳ ತಂಡ ಒಂದು ಸ್ಥಳಕ್ಕೆ ದೌಡಾಯಿಸಿದ್ದು, ಬಾಲಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದು. ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಘಟನೆಗೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ವೀರ್ಪುರ ಪೊಲೀಸ್ ಠಾಣಾಧಿಕಾರಿ ಪಲ್ಲವ್ ಕುಮಾರ್ ತಿಳಿಸಿದ್ದಾರೆ.