ಶಿವಮೊಗ್ಗ: (shivamogga ) ಶಿವಮೊಗ್ಗ ಜಿಲ್ಲೆಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಆಘಾತಕಾರಿ ಘಟನೆಯೊಂದು ಬೆಳಕಿಗೆ ಬರುತ್ತಿದ್ದಂತೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಮೂಲಕವಾಗಿ ಬೇಸಿಕ್ ಸೆಟ್ ಮೊಬೈಲ್ ಅನ್ನು ಹೊರಗೆ ತೆಗೆದಿದ್ದಾರೆ.
ಖೈದಿ ದೌಲತ್ (30)ಯನ್ನು 2021ರಲ್ಲಿ ತುಂಗಾ ನಗರ ಪೊಲೀಸರು ದೊಡ್ಡ ಬೇಟೆಯಾಡಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ. ಆರೋಪಿ ದೌಲತ್ಗೆ ಶಿವಮೊಗ್ಗ ಕೋರ್ಟ್ 2024 ರಂದು 10 ವರ್ಷ ಶಿಕ್ಷೆ ವಿಧಿಸಿತ್ತು. ಹೀಗಾಗಿ ಖೈದಿ ದೌಲತ್ ಶಿವಮೊಗ್ಗದ ಜೈಲಿನಲ್ಲಿದ್ದ. ಶಿವಮೊಗ್ಗದ ನ್ಯಾಯಾಲಯವು ಪ್ರಕರಣವೊಂದರಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜೂನ್ 24ರಂದು ದೌಲತ್, ಜೈಲಿನ ಆಸ್ಪತ್ರೆಗೆ ಭೇಟಿ ನೀಡಿ, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಆದರೆ ವೈದ್ಯರು ಪರೀಕ್ಷೆಯ ವೇಳೆ ಅವನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖೈದಿಯನ್ನ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.
ನಂತರ ಎಕ್ಸ್‌ರೇ ಪರೀಕ್ಷೆ ನಡೆಸಿದ ವೈದ್ಯರು ತಕ್ಷಣವೇ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ವೈದ್ಯರು, ಖೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಒಂದನ್ನು ಹೊರತೆಗೆದರು. ಮೊಬೈಲ್ ನುಂಗಿ ತನ್ನ ಜೀವನಕ್ಕೆ ಕುತ್ತು ತಂದುಕೊಂಡಿದ್ದು, ಸೂಕ್ತ ಸಮಯದಲ್ಲಿ ಆಪರೇಷನ್ನಿಂದಾಗಿ ಬಚಾವ್ ಆಗಿದ್ದಾನೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಖೈದಿಯ ಹೊಟ್ಟೆಯಿಂದ ಶಸ್ತ್ರಚಿಕಿತ್ಸೆಯ ಮೂಲಕ ಮೊಬೈಲ್ ಫೋನ್ ಹೊರತೆಗೆದಿದ್ದಾರೆ. ಈ ಘಟನೆಯು ಜೈಲಿನ ಭದ್ರತಾ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳು ಕೇಳಿ ಬರುತ್ತಿವೆ.
ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್, ಜೈಲಿನೊಳಗೆ ಮೊಬೈಲ್ ಫೋನ್ ತಲುಪಿದ ಕುರಿತು ಸಮಗ್ರ ತನಿಖೆ ನಡೆಸುವಂತೆ ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ.