ಕೋಲಾರ: ರಾಜ್ಯ ಸರ್ಕಾರವು ಅಭಿವೃದ್ಧಿಗೆ ತಕ್ಕಂತೆ ಅನುದಾನ ಕಲ್ಪಿಸುತ್ತಿದ್ದು, ತಾಲೂಕಿನಾದ್ಯಂತ ಅಗತ್ಯವಿರುವ ಗ್ರಾಮಗಳಲ್ಲಿ ಮಾದರಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.
ನಗರದ ಕೀಲುಕೋಟೆ ಬಡಾವಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಿರ್ಮಾಣ ಮಾಡಲಾಗಿರುವ ಅಂಗನವಾಡಿ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿ, ನಮ್ಮೆಲ್ಲ ಆದ್ಯತೆ ಇರುವುದು ಅಭಿವೃದ್ಧಿಯತ್ತ. ಟೀಕೆ ಮಾಡುವವರು ಬಂದು ಅಭಿವೃದ್ಧಿ ಕುರಿತು ಪ್ರಶ್ನಿಸಿದರೆ ದಾಖಲೆ ಸಮೇತ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಗರದ ಹೃದಯ ಭಾಗದಲ್ಲಿ ಮಾದರಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದಕ್ಕೆಲ್ಲ ಈ ಭಾಗದ ನಗರಸಭೆ ಸದಸ್ಯರು, ನಾಗರಿಕರ ಸಹಕಾರದಿಂದ ಸಾಧ್ಯವಾಗಿದೆ. ಕೇಂದ್ರದ ಮುಂದೆ ಖಾಲಿಯಿರುವ ನಿವೇಶನದಲ್ಲಿ ಮಕ್ಕಳ ಆಟಿಕೆ ಸಮಾಗ್ರಿ ಅಳವಡಿಸಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದರು.
ಮಹಿಳಾ ಪ್ರಥಮ ದರ್ಜೆ ದರ್ಜೆ ಕಾಲೇಜು, ಬಾಲಕರ ಪ್ರಥಮ ದರ್ಜೆ ಕಾಲೇಜು, ಪಿಜಿ ಕೇಂದ್ರ, ಸರ್ಕಾರಿ ಕಾನೂನು ಕಾಲೇಜು, ಅಬ್ದುಲ್ ಕಲಾಂ ವಸತಿ ಶಾಲೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅನುದಾನ ಬರಲು ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಕೃಷ್ಣಬೇರೇಗೌಡ ಅವರ ಮಾರ್ಗದರ್ಶನದಲ್ಲಿ ಅನುದಾನ ಸಿಗಲು ಸಾಧ್ಯವಾಗಿದೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ರೂಪುರೇಷಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಇಡೀ ರಾಜ್ಯದಲ್ಲಿ ಮೈಸೂರು ನಂತರ ಕೋಲಾರ ತಾಲೂಕಿಗೆ ದೊಡ್ಡ ಮೊತ್ತದಲ್ಲಿ ಅನುದಾನ ದೊರೆತಿದೆ. ಜಿಲ್ಲೆಯ ಲೆಕ್ಕ ಹಾಕಿಕೊಂಡು ಅದರ ಲೆಕ್ಕ ಇನ್ನು ದೊಡ್ಡ ಮಟ್ಟದಲ್ಲಿ ಇದೆ. ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಕೃಷ್ಣಬೈರೇಗೌಡರು ಸೇರಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ನಗರಸಭೆ ಅಧ್ಯೆ ಲಕ್ಷಿ$್ಮದೇವಮ್ಮ, ಉಪಾಧ್ಯೆ ಸಂಗೀತಾ, ಸದಸ್ಯರಾದ ರಾಕೇಶ್, ಗುಣಶೇಖರ್, ಭಾಗ್ಯಮ್ಮ, ರಫಿಕ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲ್, ಮುಖಂಡರಾದ ಜೆ.ಕೆ.ಜಯರಾಮ್, ರಾಜಣ್ಣ ಇದ್ದರು.
* ಅಭಿವೃದ್ಧಿ ಬಗ್ಗೆ ಚರ್ಚಿಸಲಿ
ಆರ್ಎಸ್ಎಸ್ ಬಗ್ಗೆ ಬಿಜೆಪಿ, ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳುವುದು ನಮಗೆ ಬೇಡ. ಎಲ್ಲಿ ಅಂಗನವಾಡಿ ಬೇಕು, ಅಭಿವೃದ್ಧಿ ಆಗಬೇಕಾಗಿರುವ ಬಗ್ಗೆ ಕೇಳಲಿ, ತೋರಿಸಲಿ, ನಮ್ಮನ್ನು ಕರೆದುಕೊಂಡು ಹೋಗಿ ಇಂತಹದ್ದೇ ಕೆಲಸ ಆಗಬೇಕು ಅಂತ ಹೇಳಲಿ, ಮಾಡದಿದ್ದಾಗ ಏಕೆ ಎಂದು ಪ್ರಶ್ನೆ ಮಾಡಿದರೆ ಉತ್ತರ ಕೊಡುತ್ತೇವೆ. ಟೀಕೆ ಮಾಡುವುದು ಸರಿಯಲ್ಲ ಎಂದು ಕೊತ್ತೂರು ಮಂಜುನಾಥ್ ಹೇಳಿದರು. ಆರ್ಎಸ್ಎಸ್, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಬಗ್ಗೆ ಯಾರು ಮಾತನಾಡಬಾರದು. ಅದನ್ನು ಬಿಟ್ಟು ಅವರ ಕೆಲಸವನ್ನು ಮಾಡಿಕೊಂಡು ಹೋದರೆ ಅಭಿವೃದ್ಧಿ ಕಾಣಲು ಸಾಧ್ಯ. ಕೆಲಸ ಮಾಡಬೇಕು ಅಂತ ನಾವು ಬಂದಿದ್ದು ಅದರ ಪ್ರಕಾರ ಮಾಡಿಕೊಂಡು ಹೋಗುತ್ತೇವೆ. ಜನರ ನಿರೀೆಯಂತೆ ಕೆಲಸ ಮಾಡಸಲಾಗುವುದು ಎಂದು ತಿಳಿಸಿದರು.
* ಹೈಕಮಾಂಡ್ ನಿರ್ಧಾರಕ್ಕೆ ಬದ್ಧ
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ಸೇರಿ ಇನ್ನೊಬ್ಬರು ಹೇಳುವುದು ಸುಳ್ಳು. ಈ ವಿಚಾರವೆಲ್ಲ ಹೈಕಮಾಂಡ್ಗೆ ಬಿಟ್ಟ ವಿಚಾರ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಖಾರ್ಜುನ ರ್ಖಗೆ, ಡಿ.ಕೆ.ಶಿವಕುಮಾರ್ ಕುಳಿತು ಏನು ತೀರ್ಮಾನ ಕೈಗೊಳ್ಳುತ್ತಾರೊ ಅದಕ್ಕೆ ನಾವೆಲ್ಲ ಬದ್ಧ. ಇನ್ನು ಸಿಎಂ ಬದಲಾವಣೆಗೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
* ಮಾದರಿ ಕೇಂದ್ರ ನಿರ್ಮಾಣಕ್ಕೆ ಒತ್ತು
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಅಂಗನವಾಡಿ ಕೇಂದ್ರವು ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಿಪಾಯ ಹಾಕುತ್ತದೆ. ಅದ್ದರಿಂದ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವುಳ್ಳ ಮಾದರಿ ಕೇಂದ್ರಗಳನ್ನು ಸ್ಥಾಪನೆಗೆ ಸರ್ಕಾರ ಆಧ್ಯತೆ ನೀಡಿದ್ದು, ಅಗತ್ಯವಿರುವ ಕಡೆ ಮಾದರಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.