ಪಿರಿಯಾಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಉದ್ಘಾಟಿಸಿದರು. ಪಿಎಸ್‌ಐ ಎಸ್.ಕೆ.ಆಕಾಶ್, ನವೀನ್ ಕುಮಾರ್, ಬಿ.ಎಸ್.ಸತೀಶ್ ಆರಾಧ್ಯ ಮತ್ತಿತರರಿದ್ದರು. 
ನ್ಯೂಸ್

ನೈತಿಕತೆ ಅಳವಡಿಸಿಕೊಂಡರೆ ಮಾದರಿ ಜೀವನ

ವಸಂತಕುಮಾರ್ ಬಿ

ಪಿರಿಯಾಪಟ್ಟಣ: ಜೀವನದಲ್ಲಿ ನೈತಿಕತೆ, ಪ್ರಾಮಾಣಿಕತೆ ಮತ್ತು ಶ್ರದ್ಧೆ ಅಳವಡಿಸಿಕೊಂಡಲ್ಲಿ ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬಹುದು ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಪೀಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬಿಜಿಎಸ್ ಪ್ರಥಮ ದರ್ಜೆ ಕಾಲೇಜ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಆಧ್ಯಾತ್ಮಿಕತೆಯತ್ತ ಹೆಚ್ಚಿನ ಆಸಕ್ತಿ ಮೂಡುತ್ತಿರುವುದು ಒಳ್ಳೆಯ ಬೆಳವಣಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ತಲುಪಬೇಕಿದ್ದಲ್ಲಿ, ಪರಿಶ್ರಮದ ಅಗತ್ಯವಿದೆ. ಸಾಮಾಜಿಕ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಗುರಿ ಸಾಧಿಸುವ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದರು.

ಶಿಕ್ಷಣ, ದಾಸೋಹ ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಿಜಿಎಸ್ ಸಂಸ್ಥೆ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.
ಪೊಲೀಸ್ ಉಪ ನಿರೀಕ್ಷಕ ಎಸ್.ಕೆ.ಆಕಾಶ್ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಯುವಪೀಳಿಗೆ ಪಾತ್ರ ಮಹತ್ವದ್ದಾಗಿದೆ.
ಕಾಲೇಜು ದಿನಗಳು ನಮ್ಮ ಜೀವನದಲ್ಲಿ ಎಂದೂ ಸ್ಮರಣೀಯ ದಿನಗಳಾಗಿದ್ದು, ಸ್ನೇಹಿತರೊಂದಿಗಿನ ಒಡನಾಟ ಮರೆಯಲಾಗದ ಅನುಭವ ನೀಡುತ್ತವೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಪಾಲಕರ ಕನಸನ್ನು ನನಸು ಮಾಡಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಕಲಿಕೆ ಜತೆ ಒಳ್ಳೆಯ ಸಂಸ್ಕಾರ ಕಲಿತು ಮಹನೀಯರ ಆದರ್ಶ ಅಳವಡಿಸಿಕೊಳ್ಳಬೇಕು. ಬದುಕು ಸರಳವಲ್ಲ ಅದನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ. ಕೆಟ್ಟದ್ದನ್ನು ಮರೆತು ಒಳ್ಳೆಯದನ್ನು ಆರಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್.ಸತೀಶ್ ಆರಾಧ್ಯ, ನಿಲಯಪಾಲಕರಾದ ಕೃಷ್ಣೇಗೌಡ, ಚಿತ್ರನಟಿ ಖುಷಿ ನಾಯರ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ಕುಮಾರ್ ಮಾತನಾಡಿದರು. ಚಿತ್ರನಟಿ ಖುಷಿ ನಾಯರ್ ನಡೆಸಿಕೊಟ್ಟ ಕಾರ್ಯಕ್ರಮ ವಿದ್ಯಾರ್ಥಿಗಳನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಬಿಜಿಎಸ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಆರ್.ಪ್ರವೀಣ್, ಸಂಸ್ಥೆ ಆಡಳಿತ ಅಧಿಕಾರಿ ಎಚ್.ಎನ್ ಸುಧಾಕರ್, ಉಪನ್ಯಾಸಕರಾದ ಕೆ.ಎಲ್.ಅವಿನಾಶ್, ಶೆಟ್ಟಹಳ್ಳಿ ಮಹದೇವ್, ಜೆ.ಎಂ.ಅವಿನಾಶ್, ಇಲಿಯಾಸ್ ಖಾನ್, ಸ್ವಾಮಿ, ಪ್ರಸಾದ್ ಕುಮಾರ್, ಎಚ್.ಕೆ ಶಿಲ್ಪಾ, ದಿವ್ಯಾ ಮತ್ತಿತರರಿದ್ದರು.