ನ್ಯೂಸ್

ರಫೇಲ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮೋದಿ

ರಮೇಶ್​ ಕುಮಾರ್​​ ಬಿ ಎಡಮೋಳೆ

ನವದೆಹಲಿ: ಫ್ರಾನ್ಸ್​ನಿಂದ ಖರೀದಿಸಲಾಗಿರುವ ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್​ನ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಾರಂಭದ ಅಧಿಕೃತ ದಿನಾಂಕ ಇನ್ನೂ ಘೊಷಣೆಯಾಗಿಲ್ಲ. ಆಗಸ್ಟ್ ಕೊನೆ ವಾರ ಅಥವಾ ಸೆಪ್ಟೆಂಬರ್​ನ ಮೊದಲ ವಾರದಲ್ಲಿ ಅಂಬಾಲಾ ವಾಯುನೆಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ. ಈ ವೇಳೆ ವಾಯುಪಡೆಯ ಗೋಲ್ಡನ್ ಏರೋಸ್ ಸ್ಕಾ್ವಡ್ರನ್​ಗೆ ರಫೇಲ್ ವಿಮಾನಗಳನ್ನು ಸೇರ್ಪಡೆಗೊಳಿಸ ಲಾಗುತ್ತದೆ. ಕಳೆದ ಜುಲೈ 29ರಂದು ಐದು ರಫೇಲ್ ಜೆಟ್​ಗಳು ಫ್ರಾನ್ಸ್​ನಿಂದ ಭಾರತಕ್ಕೆ ಬಂದಿಳಿದಿವೆ. ಅವುಗಳ ಪ್ರಾಯೋಗಿಕ ಕಾರ್ಯಾಚರಣೆಯೂ ನಡೆಯುತ್ತಿದೆ.

ಕೇಂದ್ರ ಸರ್ಕಾರ 2016ರಲ್ಲಿ ಫ್ರಾನ್ಸ್​ನಿಂದ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ಜೆಟ್​ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಈ ವರ್ಷದ ಆರಂಭದಲ್ಲೇ ರಫೇಲ್ ಜೆಟ್​ಗಳ ಮೊದಲ ಬ್ಯಾಚ್ ಭಾರತಕ್ಕೆ ಬರಬೇಕಾಗಿತ್ತು. ಕರೊನಾ ಬಿಕ್ಕಟ್ಟು ಪರಿಸ್ಥಿತಿಯಿಂದಾಗಿ ಹಸ್ತಾಂತರ ಪ್ರಕ್ರಿಯೆ ವಿಳಂಬಗೊಂಡಿತ್ತು.