ಮೈಸೂರು: ನಗರದ ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಸಮಾರಂಭ ನೆರವೇರಿತು.
ಇದೇ ವೇಳೆದ ಸದ್ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಾದ ಟಿ.ಸ್ವರ್ಣ, ಆರ್.ರಮ್ಯಾ, ಮಾನಸ ಮಂಜುನಾಥ್, ಲತಾದೇವಿ, ಸವಿತಾ, ಎಂ.ಪಿ.ಬಿಂದು, ಶಿಲ್ಪಶ್ರೀ, ಡಿ.ಎಂ.ರಜನಿ ಹಾಗೂ ಡಾ.ಕೆ.ಅಶ್ವಿನಿ ಅವರನ್ನು ಸನ್ಮಾನಿಸಲಾಯಿತು.
ಮೈಸೂರು ವಿವಿ ಪ್ರಸಾರಾಂಗ ನಿರ್ದೇಶಕ ಪ್ರೊ.ಸಿ.ನಾಗಣ್ಣ ಶಿಕ್ಷಕರನ್ನು ಸನ್ಮಾನಿಸಿ ಶುಭಕೋರಿದರು. ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಗೌರವ ಅಧ್ಯಕ್ಷ ಪ್ರೊ.ಎಂ.ಎಸ್.ಕೆ.ನರಹರಿ ಬಾಬು ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಎಂ.ಡಿ.ಗೋಪಿನಾಥ್, ಮುಖ್ಯೋಪಾಧ್ಯಾಯರಾದ ರಾಮಚಂದ್ರ ಭಟ್, ಸುಮಾ ಪಂಚವಳ್ಳಿ, ಪಿಯು ಕಾಲೇಜು ಪ್ರಾಂಶುಪಾಲ ವೈ.ಆರ್.ರಮೇಶ್ ಇತರರಿದ್ದರು.