ಸಾಂದರ್ಭಿಕ ಚಿತ್ರ 
ನ್ಯೂಸ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು; ಜಿಡ್ಡಿ ಗ್ರಾಮದ ಮಹಿಳೆ ಬಲಿ

Webdesk - Savina Naik

ಉತ್ತರಕನ್ನಡ: ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಮೊದಲ ಸಾವು ಪ್ರಕರಣ ದಾಖಲಾಗಿದೆ.

ಮಂಗನ ಕಾಯಿಲೆಗೆ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಸಿದ್ದಾಪುರದ ಜಿಡ್ಡಿ ಗ್ರಾಮದ ಮಹಿಳೆ. ನಿನ್ನೆ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೂಕ್ತ ಲಸಿಕೆ ಇಲ್ಲ. ಜಿಲ್ಲೆಯಲ್ಲಿ ಈವರೆಗೆ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿವೆ. ಎಲ್ಲಾ ಪ್ರಕರಣಗಳು ಸಿದ್ದಾಪುರ ತಾಲೂಕಿನಲ್ಲೇ ಪತ್ತೆಯಾಗಿವೆ.