ನ್ಯೂಸ್

ಮಠದ ಆವರಣದೊಳಗಿದ್ದ 15ಕ್ಕೂ ಹೆಚ್ಚು ಸಮಾಧಿಗಳೇ ಧ್ವಂಸ!

ತುಮಕೂರು: ಮಠವೊಂದರ ಆವರಣದೊಳಗಿದ್ದ 15ಕ್ಕೂ ಹೆಚ್ಚು ಸಮಾಧಿಗಳನ್ನು ಧ್ವಂಸಗೊಳಿಸಿರುವ ಪ್ರಕರಣವೊಂದು ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಆವರಣದಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ಶ್ರೀಗುರುಗುಂಡ ಬ್ರಹ್ಮೇಶ್ವರ ಮಠದೊಳಗಿನ ಆವರಣದಲ್ಲಿದ್ದ ಕುರುಬ ಸಮಾಜದ ಪೂರ್ವಜರ ಸಮಾಧಿಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ ಆರೋಪ ಕೇಳಿಬಂದಿದೆ. ಸಮಾಧಿಗಳನ್ನು ಧ್ವಂಸಗೊಳಿಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ತುಮಕೂರು ಜಿಲ್ಲಾ ಎಸ್​ಪಿ ರಾಹುಲ್ ಕುಮಾರ್ ಶಹಾಪುರ್ ಅವರು ಸ್ಥಳಕ್ಕೆ ಆಗಮಿಸಿ ಮೊಕ್ಕಾಂ ಹೂಡಿದ್ದಾರೆ. ಕುರುಬ ಸಮಾಜದ ಮುಖಂಡರು ಪೊಲೀಸ್ ಠಾಣೆಗೆ ದೂರು‌ ನೀಡಿದ್ದು, ದುಷ್ಕರ್ಮಿಗಳ ಕೃತ್ಯವೆಂದು ಮಠದ ಕಡೆಯಿಂದ ದೂರು ನೀಡಲಾಗಿದೆ. ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.