ನ್ಯೂಸ್

20ಕ್ಕೂ ಹೆಚ್ಚು ಜನರಿಗೆ ಹುಚ್ಚುನಾಯಿ ಕಡಿತ

ನಂಜನಗೂಡು: ತಾಲೂಕಿನ ತಾಂಡವಪುರ ಗ್ರಾಮದಲ್ಲಿ 20ಕ್ಕೂ ಹೆಚ್ಚು ಜನರು ಹುಚ್ಚು ನಾಯಿ ಕಡಿತಕ್ಕೆ ಒಳಗಾಗಿದ್ದು, ಇದರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ರಾಮದ ರವಿರಾಜ್, ಹುಚ್ಚಪ್ಪ, ರೇವಣ್ಣ, ವೀರಭದ್ರಸ್ವಾಮಿ, ಪುಟ್ಟರಾಜು, ಶಿವಣ್ಣ, ರಾಜಣ್ಣ, ಕೃಷ್ಣಪ್ಪ, ಅಮರ್‌ಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ. ಗಾಯಗೊಂಡವರನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸಾಂಕ್ರಾಮಿಕ ಕಾಯಿಲೆಗಳ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಈಶ್ವರ್ ಕನಾಟ್ಕೆ ತಿಳಿಸಿದ್ದಾರೆ.