ನ್ಯೂಸ್

ಕೃಷಿ ಹೊಂಡಕ್ಕೆ ಬೀಳುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಪ್ರಾಣ ಕಳೆದುಕೊಂಡಳು!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ - ಮಗು ಮೃತಪಟ್ಟಿರುವ ಪ್ರಕರಣ ಭಾನುವಾರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರೂಪಾ(35) ಹಾಗೂ ಹೇಮಂತ್ (9) ಎಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ನಿವಾಸಿಗಳು ಎನ್ನಲಾಗಿದೆ, ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

9 ವರ್ಷದ ಹೇಮಂತ್ ಕೃಷಿ ಹೊಂಡದ ಬದುವಿನ ಮೇಲೆ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಈ ಸಂದರ್ಭ ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.