ನಾಸಿಕ್: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂದು ನಮ್ಮ ಹಿರಿಯರು ಹೇಳಿದೆ ಹಾಗೆ ಅತ್ತೆ ಸೊಸೆ ನಡುವಿನ ಗಲಾಟೆ ಎಂದಿಗೂ ಎವರ್ಗ್ರೀನ್ ಎಂದರೆ ತಪ್ಪಾಗಲಾರದು. ಕೆಲಸ ಹಾಗೂ ಇನ್ನಿತರೆ ವಿಚಾರಗಳಿಗಾಗಿ ಅತ್ತೆ ಹಾಗೂ ಸೊಸೆ ನಡುವೆ ಮನಸ್ತಾಪ ಉಂಟಾಗಿ ಪ್ರಕರಣಗಳು ಕೋರ್ಟ್ ಹಾಗೂ ಪೊಲೀಸ್ ಠಾಣೆ ಮೆಟ್ಟಿಲೇರಿರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ವಿಚಿತ್ರ ಘಟನೆಯಲ್ಲಿ ಅತ್ತೆ-ಸೊಸೆ ಕುಟುಂಬಸ್ಥರ ಜೊತೆ ಸೇರಿಕೊಂಡು ಕೋರ್ಟ್ ಆವರಣದಲ್ಲೇ ಹೊಡೆದಾಡಿಕೊಂಡಿರುವ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ (Viral Video) ಆಗಿದೆ.
ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದ್ದು, ಅತ್ತೆ ಸೊಸೆ ನ್ಯಾಯಾಲಯದ ಆವರಣದಲ್ಲಿಯೇ ಜಗಳವಾಡಿದ್ದಾರೆ. Ghar Ke Kalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು (Viral Video) ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋ ಸದಯ 452.6ಕೆ ವೀವ್ಸ್ ಪಡೆದುಕೊಂಡಿದೆ.
ಕೇಳಿ ಬಂದಿರುವ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹದ ವಿಚಾರಣೆಗೆ ಹಾಜರಾಗಿದ್ದ ಅತ್ತೆ-ಸೊಸೆ ಕೋರ್ಟ್ ಆವರಣದಲ್ಲಿ ಮುಖಾಮುಖಿಯಾಗಿದ್ದು, ಇಬ್ಬರು ಪರಸ್ಪರ ನೋಡಿಕೊಳ್ಳುತ್ತಿದ್ದಂತೆ ಮಾತಿನ ಚಕಮಕಿ ಶುರುವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಹೊಡೆದಾಡಿಕೊಳ್ಳಲು ಶುರು ಮಾಡಿದ್ದಾರೆ. ಇವರ ಜೊತೆ ಬಂದಿದವರು ಕೂಡ ಬಡಿದಾಡಿಕೊಂಡಿದ್ದು, ಬಿಡಿಸಲು ಹೋದವರಿಗೂ ಗೂಸಾವನ್ನು ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು, ಸರ್ಕಾರ್ವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೋರ್ಟ್ ಆವರಣದಲ್ಲಿ ಹೊಡೆದಾಡಿಕೊಂಡವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎರಡು ಗುಂಪುಗಳನ್ನು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಲಾಗಿದ್ದು, ಈ ರೀತಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ವಿಚಾರಣೆ ವೇಳೆ ಯಾವ ಕಾರಣಕ್ಕೆ ಹೊಡೆದಾಡಿಕೊಂಡರು ಎಂಬುದರ ಬಗ್ಗೆ ಸ್ಪಷ್ಟನೆಯನ್ನು ನೀಡಿಲ್ಲ ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.