ನ್ಯೂಸ್

ಪ್ರಿಯಾಂಕಾ ಗಾಂಧಿಗೆ ಕಾನೂನುಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವ!; ಕಾರಣವೇನು?

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಗೃಹ ಸಚಿವರೊಬ್ಬರು ಕಾನೂನುಕ್ರಮದ ಎಚ್ಚರಿಕೆ ನೀಡಿದ್ದಾರೆ. ಪ್ರಿಯಾಂಕಾ ಗಾಂಧಿ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದ ಪೋಸ್ಟ್​ವೊಂದರ ಹಿನ್ನೆಲೆಯಲ್ಲಿ ಇಂಥದ್ದೊಂದು ಎಚ್ಚರಿಕೆ ನೀಡಲಾಗಿದೆ.

ಹೀಗೆ ಪ್ರಿಯಾಂಕಾ ಗಾಂಧಿಗೆ ಕಾನೂನುಕ್ರಮದ ಎಚ್ಚರಿಕೆ ನೀಡಿದ್ದು ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್ ಶರ್ಮಾ. ಬಿಜೆಪಿ ನೇತೃತ್ವದ ಮಧ್ಯಪ್ರದೇಶದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಪ್ರಿಯಾಂಕಾ ಗಾಂಧಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಶರ್ಮಾ ಈ ಎಚ್ಚರಿಕೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್​ಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಕೆಲವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರಿಯಾಂಕಾ ಗಾಂಧಿಗೆ ಕಾನೂನುಕ್ರಮದ ಎಚ್ಚರಿಕೆ ನೀಡಲಾಗಿದೆ.

ಸರ್ಕಾರದ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸೂಕ್ತ ದಾಖಲೆ ಕೊಡಬೇಕು, ಯಾವ ಆಧಾರದ ಮೇಲೆ ಆರೋಪ ಮಾಡಲಾಗಿದೆ ತಿಳಿಸಬೇಕು. ತಪ್ಪಿದಲ್ಲಿ ಕಾನೂನುಕ್ರಮ ಜರುಗಿಸುವ ಅವಕಾಶ ಬಿಜೆಪಿ ಪಕ್ಷ ಮತ್ತು ಸರ್ಕಾರದ ಬಳಿ ಇದೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. -ಏಜೆನ್ಸೀಸ್