ನ್ಯೂಸ್

ಸಿದ್ದರಾಮಯ್ಯ ವಿರುದ್ಧದ MUDA ಕೇಸ್​: ಇಡಿಯಿಂದ 300 ಕೋಟಿ ರೂ. ಸ್ಥಿರಾಸ್ತಿ ಜಪ್ತಿ

ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೇಳಿಬಂದಿರುವ ಮುಡಾ ಆಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೊತ್ತದ 140 ಸೈಟ್​ಗಳನ್ನು( ಸ್ಥಿರಾಸ್ತಿ) ಜಪ್ತಿ ಮಾಡಿಕೊಂಡಿದೆ.

ಈ ಹಗರಣ ಕುರಿತು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿನಲ್ಲಿ 14 ಮುಡಾ ಸೈಟ್ ಗಳನ್ನು ಪಡೆಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 300 ಕೋಟಿ ರೂ. ಮೌಲ್ಯದ 140 ಸೈಟ್​ಗಳ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

MUDA ನಡೆಸಿದ ಭೂ ಹಂಚಿಕೆಯಲ್ಲಿನ ಅಕ್ರಮಗಳ ಕುರಿತು ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲದೆ, ಮುಡಾ ವ್ಯಾಪ್ತಿಯಲ್ಲಿ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.