ಬೆಂಗಳೂರು:
ಮುಡಾ ಪ್ರಕರಣದಲ್ಲಿ ವಾಸ್ತವಗಳನ್ನು ಜನರಿಗೆ ತಿಳಿಸಲಾಗಿದೆ. ಬಿಜೆಪಿ ಪಾದಯಾತ್ರೆ ಮಾಡುವುದಾದರೆ ಮಾಡಿಕೊಳ್ಳಲಿ ಬಿಡಿ ಎಂದು ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳೇ ಎಲ್ಲವನ್ನೂ ವಿವರವಾಗಿ ಹೇಳಿದ್ದಾರೆ. ಆದರೂ, ಈ ಬಗ್ಗೆ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದರು.
ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನು ಸಚಿವನಷ್ಟೆ. ಹೈಕಮಾಂಡ್ ಅಲ್ಲ. ಈ ವಿಷಯಗಳ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದರು.