ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) Muda Scam 14 ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಇದರಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ 125 ವರ್ಷ ಬದುಕಲಿ: ಶುಭ ಹಾರೈಸುತ್ತಲೇ ರಾಜನಾಥ್ ಸಿಂಗ್ ಟಾಂಗ್!
ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ಅಕ್ರಮವಾಗಿ ಸೈಟ್ಗಳನ್ನು ಪಡೆದಿದ್ದು, ಈ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.‘
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲೂ ಸಿಎಂ ಸಿದ್ದರಾಮಯ್ಯ ಅವರು ಆರೋಪಿ ಎ1 ಆರೋಪಿ ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ. ಇನ್ನು ಜಾರಿ ನಿರ್ದೇಶನಾಲಯದ ಕೇಸಿನಲ್ಲಿ ಸಿಎಂ ವಿರುದ್ಧ ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತಂತೆ ಪ್ರಕರಣ ದಾಖಲಾಗಿದೆ.
ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಹೀಗಾಗಿ ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ. ಯಾವುದೇ ಸಂದರ್ಭದಲ್ಲಿ ಇಡಿಯಿಂದ ದಾಳಿಯಾಗುವ ಸಾಧ್ಯತೆ ಇದೆ. ದಾಖಲೆಗಳ ಪರಿಶೀಲನೆಗೆ ದಾಳಿ ಮಾಡಬಹುದು. ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಮುಡಾ ಕಚೇರಿ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ನಿವಾಸದ ಮೇಲೆ ಸಾಧ್ಯತೆಯಿದೆ.