ನ್ಯೂಸ್

ಮುಡಾ ಹಗರಣ; ಸದ್ಯಕ್ಕಿಲ್ಲ ತೀರ್ಪು: ಸಿದ್ದರಾಮಯ್ಯಗೆ ತಾತ್ಕಾಲಿಕ ರೀಲಿಫ್​​ ನೀಡಿದ ಕೋರ್ಟ್​ | Muda Scam

Muda Scam : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್​​ ತಾತ್ಕಾಲಿಕ ರೀಲಿಫ್​​ ನೀಡಿದೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕಾರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿ ರಿಪೋರ್ಟ್​ ಕುರಿತ ಆದೇಶ ಸದ್ಯಕ್ಕಿಲ್ಲ ಎಂದು ಕೋರ್ಟ್​ ಮಂಗಳವಾರ ಹೇಳಿದೆ. ಅಲ್ಲದೆ, ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಪೀಠ ಸೂಚಿಸಿದೆ.

ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್ ಮೇ.7 ಕ್ಕೆ ವಿಚಾರಣೆ ಮುಂದೂಡಿದೆ.