ನ್ಯೂಸ್

ಥಾಯ್​​ ಮಹಿಳೆ ಬಂಧನ; ಈಕೆ ಸಾಗಿಸಿದ ಕೊಕೈನ್​ ಮೌಲ್ಯ ಎಷ್ಟು ಕೇಳಿದ್ರೆ ಬೆರಗಾಗ್ತೀರಾ?

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ 21 ವರ್ಷದ ಥಾಯ್ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬಂಧಿಸಿದೆ.

ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ, ಆಫ್ರಿಕಾದ ಅಡಿಸ್ ಅಬಾಬದಿಂದ ಆಗಮಿಸಿದ ಮಹಿಳೆಯನ್ನು ಬಂಧಿಸಿದ್ದಾರೆ.

ಆಕೆಯನ್ನು ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಬಂದಿರಲಿಲ್ಲ. ಅವರ ಟ್ರಾಲಿ ಬ್ಯಾಗ್​ನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದಾಗ ಬಿಳಿ ಪುಡಿಯಂತಹ ವಸ್ತು ಹೊಂದಿರುವ ಅನೇಕ ಪ್ಯಾಕೆಟ್​ಗಳು ಪತ್ತೆಯಾಗಿವೆ. ನಂತರ ಅದನ್ನು ಪರೀಕ್ಷಿಸಿದಾಗ ಕೊಕೇನ್​ ಎಂದು ದೃಢಪಟ್ಟಿದೆ.

ಅಂದಾಜು 40 ಕೋಟಿ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಹೊಂದಿದೆ ಎಂದು ಕಂದಾಯ ನಿರ್ದೇಶನಾಲಯ ತಿಳಿಸಿದೆ. ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.