ರಾಣೆಬೆನ್ನೂರ: ನಗರದ ಆರ್‌ಟಿಇಎಸ್ ಕಾಲೇಜ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ಮಾಕನೂರ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.
ವೀರಗಾಸೆ, ಜಾನಪದ ನೃತ್ಯದಲ್ಲಿ, ಕವಾಲಿ ಪ್ರದರ್ಶನದಲ್ಲಿ, ಚರ್ಚಾ ಸ್ಪರ್ಧೆ, ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಜತೆಗೆ ಕವನ ವಾಚನದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಮುಸ್ತುಫಾ ಡಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.