ನ್ಯೂಸ್

ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಶವವನ್ನುಕಚ್ಚಿ ತಿಂದ ಶ್ವಾನಗಳು

ಮುಂಬೈ:  ಎರಡು ದಿನಗಳಿಂದ ಕಾಣೆಯಾಗಿದ್ದ ಯುವತಿಯ ಮೃತದೇಹ ರಕ್ತಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ ನವೀ ಮುಂಬೈನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಯಶಶ್ರೀ (22 ) ಮೃತ ಯುವತಿ. ಕರ್ನಾಟಕ ಮೂಲದ ದಾವೂದ್ ಶೇಖ್ ಬಂಧಿತ.  ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯೊಬ್ಬಳ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಯಶಶ್ರಿ ಶಿಂಧೆ ಮೃತ ದೇಹವು ನವಿ ಮುಂಬೈನ ಉರಾನ್ ತಾಲೂಕಿನಲ್ಲಿ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಆಕೆಯ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.

ಅವಳ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿಯಲಾಗಿದೆ. ಹಾಗೂ ಆಕೆಯ ಭುಜದ ಮಾಂಸವನ್ನೂ ತಿಂದು ಹಾಕಿದ್ದ ಬೀದಿನಾಯಿಗಳು ಮುಖವನ್ನೂ ವಿರೂಪಗೊಳಿಸಿವೆ. ಯಶಶ್ರಿ ಧರಿಸಿದ ಬಟ್ಟೆ ಹಾಗೂ ಮೈಮೇಲಿದ್ದ ಟ್ಯಾಟೂ ಸಹಾಯದಿಂದ ಗುರುತು ಪತ್ತೆ ಹಚ್ಚಲಾಗಿದೆ. ಜುಲೈ 25 ರಂದು ಯಶಶ್ರಿ ಶಿಂಧೆ ಕಾಣೆಯ ಬಗ್ಗೆ ಪೋಷಕರು ಪ್ರಕರಣವನ್ನು ದಾಖಲಿಸಿದ್ದರು. ಹೀಗಾಗಿ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದರು.

ಕರ್ನಾಟಕ ಮೂಲದ ದಾವೂದ್ ಶೇಖ್ ಎಂಬಾತ ತಮ್ಮ ಮಗಳನ್ನು ಕೊಂದಿದ್ದಾನೆ ಎಂದು ಯಶಶ್ರಿ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರ ವರದಿಯ ಪ್ರಕಾರ, 2019ರಲ್ಲಿ ಅಪ್ರಾಪ್ತ ವಯಸ್ಸಿನವನಾಗಿದ್ದಾಗ ಯಶಶ್ರೀಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಕರ್ನಾಟಕದ ತನ್ನ ಊರಿಗೆ ಹೋಗಿದ್ದನು. ನಂತರದಲ್ಲಿಯೂ ಪೋನ್ ಮಾಡಿ ಆರೋಪಿಯೊಂದಿಗೆ ಹಲವಾರು ಗಂಟೆಗಳ ಕಾಲ ಮಾತನಾಡುತ್ತಿದ್ದಳು ಎಂದು ಕರೆ ದಾಖಲೆಗಳು ತಿಳಿಸಿದೆ. ಇನ್ನು ಕೃತ್ಯದ ಸಮಯದಲ್ಲಿ ದಾವೂದ್‌ ಆ ಸ್ಥಳದಲ್ಲಿ ಇದ್ದ ಎಂಬುದು ಪೊಲೀಸ್‌ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.