ಬಿಹಾರ: ರಾಮ ನವಮಿ ಮೆರವಣಿಗೆ ವೇಳೆ ಸಸಾರಾಂನಲ್ಲಿ ಹಿಂಸಾಚಾರ ನಡೆದಿದ್ದು, ಅಂದಿನಿಂದ ಇಲ್ಲಿಯವರೆಗೆ ಹಿಂಸಾಚಾರ ನಿಂತಿಲ್ಲ. ಈ ಮಧ್ಯೆ ರಾಷ್ಟ್ರೀಯ ಜನತಾ ದಳದ ಶಾಸಕ ಮೊಹಮ್ಮದ್ ನೆಹಾಲುದ್ದೀನ್ ಈ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.
"ಮುಸ್ಲಿಂ ಯುವಕರು ತಮ್ಮ ರಕ್ಷಣೆಗಾಗಿ ಬಾಂಬ್ಗಳನ್ನು ತಯಾರಿಸುತ್ತಿದ್ದಾರೆ. ಹಿಂಸಾಚಾರದ ವೇಳೆ ಮುಸ್ಲಿಮರು ಸತ್ತಿದ್ದರೆ ಏನು ಮಾಡುತ್ತಿದ್ದರು. ಮುಸ್ಲಿಂ ಯುವಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆಲ್ಲುವುದು ಹಾಗೂ ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆ ತರುವುದು ಅವರ ಗುರಿಯಾಗಿದೆ" ಎಂದು ರಾಷ್ಟ್ರೀಯ ಜನತಾ ದಳದ ಶಾಸಕ ಮೊಹಮ್ಮದ್ ನೆಹಾಲುದ್ದೀನ್ ಹೇಳಿದ್ದಾರೆ.
ಇದನ್ನೂ ಓದಿ: ಅಗತ್ಯ ಔಷಧಿಗಳ ಬೆಲೆಯಲ್ಲಿ ಶೇ.6.73ರಷ್ಟು ಇಳಿಕೆ!
ರಾಮನವಮಿಯಂದು ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಹಲವಾರು ಪೊಲೀಸ್ ತಂಡಗಳು ನಿರಂತರವಾಗಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಇನ್ನು ಇದುವರೆಗೂ ಪೊಲೀಸರು 109 ಮಂದಿಯನ್ನು ಬಂಧಿಸಿದ್ದಾರೆ.
ಹಿಂಸಾಚಾರ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಕಿಡಿಗೇಡಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.