ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು (68) ಹೃದಯಘಾತದಿಂದ ಶನಿವಾರ ರಾತ್ರಿ ನಿಧರಾದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರಿಗೆ ಇಂದು ಸಂಜೆ 7.20ರ ಸುಮಾರಿಗೆ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ.