ನ್ಯೂಸ್

LIVE| 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ… ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ...

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್​ ಎಕ್ಸ್​ಪ್ರೆಸ್' ಮತ್ತು “ಭಾರತ್ ಗೌರವ್ ಕಾಶಿ ದರ್ಶನ್” ರೈಲುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಪ್ರಧಾನಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್​-2 ಅನ್ನು ಉದ್ಘಾಟಿಸಿದರು. ಬಳಿಕ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಬೃಹತ್​ ಪುತ್ಥಳಿಯನ್ನು ಅನಾವರಣ ಮಾಡಿದರು.  ಬಳಿಕ ವಿಮಾನ ನಿಲ್ದಾಣದ ಸಮೀಪದ ಭುವನಹಳ್ಳಿಯಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.