ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿಹಬ್ಬ ಸಂದರ್ಭದಲ್ಲಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಹಿರಿಯ ಸಾಹಿತಿ ಕೃಷ್ಣಪ್ಪ ಜಿ. ಹಾಗೂ ಲೇಖಕ ಎಸ್. ಷಡಕ್ಷರಿ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆದ ಘಟಿಕೋತ್ಸವ ಸಂಭ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೇಹ್ಲೋಟ್ ಅವರು ಸಾಧಕರಿಗೆ ನಾಡೋಜ ಗೌರವ ಪ್ರದಾನ ಮಾಡಿದರು.
ಹಾಸನ ಮೂಲದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ, ಬೆಂಗಳೂರಿನ ಕೃಷ್ಣಪ್ಪ ಜಿ. ಅವರಿಗೆ ಸಾಹಿತ್ಯ ಕೃಷಿಯನ್ನು ಗುರುತಿಸಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ತುಳವನೂರು ಗ್ರಾಮದ ಎಸ್. ಷಡಕ್ಷರಿ ಅವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗಿದೆ.