ಬಿ.ನಾಗೇಂದ್ರ  
ನ್ಯೂಸ್

ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬಂಧಿತ ಮಾಜಿ ಸಚಿವ ಬಿ. ನಾಗೇಂದ್ರರನ್ನು ಮತ್ತೆ 5 ದಿನ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

ನಿಗಮಕ್ಕೆ ಸೇರಿದ 89.62 ಕೋಟಿ ರೂ.ಅಕ್ರಮ ವಹಿವಾಟು ಆರೋಪದ ಮೇಲೆ ಇಡಿ ಅಧಿಕಾರಿಗಳು, ಜು.12ರಂದು ಬಿ. ನಾಗೇಂದ್ರನನ್ನು ಬಂಧಿಸಿ 6 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು, ಗುರುವಾರ ಮಾಜಿ ಸಚಿವರನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ನೀಡುವಂತೆ ಇಡಿ ಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಇಡಿ ಮನವಿಯನ್ನು ಪರಸ್ಕರಿಸಿದ ಕೋರ್ಟ್, 5 ದಿನ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.

ಮತ್ತೊಂದೆಡೆ ನಿಗಮದ 89.62 ಕೋಟಿ ರೂ. ಅಕ್ರಮ ವಹಿವಾಟಿಗೆ ಶಾಸಕ ಬಸನಗೌಡ ದದ್ದಲ್ ಕೈವಾಡ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದರು. ಆದ್ದರಿಂದ ಯಾವುದೇ ಕ್ಷಣದಲ್ಲಿ ಶಾಸಕನನ್ನು ಬಂಧಿಸುವ ಸಾಧ್ಯತೆಗಳಿವೆ. ಇದಲ್ಲದೆ, ಬಿ. ನಾಗೇಂದ್ರ ಅವರ ಪತ್ನಿಯನ್ನು ಇಡಿ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿ ಸಾಕಷ್ಟು ಮಾಹಿತಿ ಪಡೆದುಕೊಂಡಿದ್ದಾರೆ. ನಿಗಮದ ಹಣ ದುರ್ಬಳಕ್ಕೆ ಇನ್ನೂ ಯಾರ ಯಾರ ಕೊರಳಿಗೆ ಬೀಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.