ನ್ಯೂಸ್

ರೈಲಿನಲ್ಲಿ ಊಟ ಮಾಡಿದ್ದಕ್ಕಾಗಿ ಮಹಿಳೆಗೆ ದಂಡ ವಿಧಿಸಿದ 'ನಮ್ಮ ಮೆಟ್ರೋ'! | Namm Metro

Namm Metro : ನಮ್ಮ ಮೆಟ್ರೋದಲ್ಲಿ ಊಟ ಮಾಡಿದ್ದಾಕ್ಕಾಗಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಬಿಎಂಆರ್​ಸಿಎಲ್,​ ಮೆಟ್ರೋದಲ್ಲಿ ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ದಂಡ ವಿಧಿಸಲಾಗಿದೆ ಎಂದಿದ್ದಾರೆ.

ಬಿಎಂಆರ್​ಸಿಎಲ್ ಹೇಳೊದೇನು..?

ನಮ್ಮ ಮೆಟ್ರೋದಲ್ಲಿ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ನಿಯಮಿತ ಪ್ರಯಾಣಿಕರೊಬ್ಬರಿಗೆ ಇಂದು ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂ. ದಂಡ ವಿಧಿಸಲಾಗಿದೆ. ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು, ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನೀತಿಯು ಕಸ ಹಾಕುವುದನ್ನು ತಡೆಗಟ್ಟುವುದು, ನೈರ್ಮಲ್ಯವನ್ನು ಕಾಪಾಡುವುದು ಮತ್ತು ಪ್ರಯಾಣಿಸುವ ಪ್ರತಿಯೊಬ್ಬರಿಗೂ ಆನಂದದಾಯಕ ವಾತಾವರಣವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದಿದ್ದಾರೆ.